ಲಕ್ನೋ: ಕೇಂದ್ರದ ಮಾಜಿ ರಕ್ಷಣಾ ಸಚಿವ ಮುಲಾಯಂ ಸಿಂಗ್ ಯಾದವ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 80 ವರ್ಷದ ಯಾದವ್ ಅವರಿಗೆ ಹೊಟ್ಟೆನೋವು ಮತ್ತು ಮೂತ್ರ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಅನಾರೋಗ್ಯ ಸಮಸ್ಯೆಯಿಂದಾಗಿ ಅವರನ್ನು ಮೇದಾಂತ ಆಸ್ಪತ್ರೆಗೆ ಬುಧವಾರ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು ಮಾನಿಟರಿಂಗ್ ಮಾಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಮುಲಾಯಂ ಪುತ್ರ ಅಖಿಲೇಶ್ ಯಾದವ್ ಮತ್ತು ಅವರ ಸಹೋದರ ಶಿವಪಾಲ್ ಯಾದವ್ ಸೇರಿದಂತೆ ಹಲವು ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.