ದೇಶ

ಪಶ್ಚಿಮ ಬಂಗಾಳಕ್ಕೆ ರೈಲು ಹೋಗಲು ಬಿಡುತ್ತಿಲ್ಲ, ಇದು ಕಾರ್ಮಿಕರಿಗೆ ಮಾಡುತ್ತಿರುವ ಅನ್ಯಾಯ: ಅಮಿತ್ ಶಾ ಆರೋಪ

Sumana Upadhyaya

ನವದೆಹಲಿ: ವಲಸೆ ಕಾರ್ಮಿಕರನ್ನು ಕರೆದೊಯ್ಯುವ ಶ್ರಮಿಕ ವಿಶೇಷ ರೈಲನ್ನು ಪಶ್ಚಿಮ ಬಂಗಾಳ ರಾಜ್ಯದೊಳಗೆ ಪ್ರವೇಶಿಸಲು ಬಿಡುತ್ತಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ. ಇದರಿಂದ ವಲಸೆ ಕಾರ್ಮಿಕರಿಗೆ ಕಷ್ಟವಾಗುತ್ತಿದೆ ಎಂದು ಹೇಳಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಪತ್ರ ಬರೆದಿರುವ ಅವರು, ಪಶ್ಚಿಮ ಬಂಗಾಳಕ್ಕೆ ರೈಲನ್ನು ಹೋಗಲು ಬಿಡದಿರುವುದು ವಲಸೆ ಕಾರ್ಮಿಕರಿಗೆ ಮಾಡುತ್ತಿರುವ ಅನ್ಯಾಯ ಎಂದಿದ್ದಾರೆ. ಶ್ರಮಿಕ ವಿಶೇಷ ರೈಲು ಮೂಲಕ 2 ಲಕ್ಷಕ್ಕೂ ಅಧಿಕ ವಲಸೆ ಕಾರ್ಮಿಕರನ್ನು ಊರಿಗೆ ಕಳುಹಿಸಲು ಕೇಂದ್ರ ಸರ್ಕಾರ ವ್ಯವಸ್ಥೆ ಮಾಡಿದೆ.

ಪಶ್ಚಿಮ ಬಂಗಾಳ ರಾಜ್ಯದ ಕಾರ್ಮಿಕರು ಕೂಡ ತಮ್ಮ ಊರುಗಳಿಗೆ ಹೋಗಲು ಕಾತರರಾಗಿದ್ದು ಕೇಂದ್ರ ಸರ್ಕಾರ ಅವರಿಗೆ ಸಹ ರೈಲು ಸೇವೆ ಒದಗಿಸುತ್ತದೆ. ಆದರೆ ನಮಗೆ ಪಶ್ಚಿಮ ಬಂಗಾಳ ಸರ್ಕಾರದಿಂದ ಬೆಂಬಲ ಸಿಗುತ್ತಿಲ್ಲ. ಅಲ್ಲಿಗೆ ರೈಲು ಹೋಗಲು ಬಿಡುತ್ತಿಲ್ಲ. ಇದು ಕಾರ್ಮಿಕರಿಗೆ ಮಾಡುತ್ತಿರುವ ಅನ್ಯಾಯ. ಇದರಿಂದ ಮತ್ತಷ್ಟು ಬಿಕ್ಕಟ್ಟು, ತೊಂದರೆ ಉಂಟಾಗಲಿದೆ ಎಂದು ಪತ್ರದಲ್ಲಿ ಆರೋಪಿಸಿದ್ದಾರೆ.

SCROLL FOR NEXT