ದೇಶ

ಯಾವುದೇ ಕಾಯಿಲೆಯಿಂದ ಬಳಲುತ್ತಿಲ್ಲ: ವದಂತಿಗಳಿಗೆ ತೆರೆ ಎಳೆದ ಅಮಿತ್ ಶಾ

Nagaraja AB

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂಬ ಊಹಾಪೋಹಗಳು ಸಾಮಾಜಿಕ ಜಾಲತಾಣಗಳಲ್ಲಿ  ಹರಿದಾಡುತ್ತಿದ್ದವು. ಇವೆಲ್ಲಾ ಸುಳ್ಳು. ನಾನು ಯಾವುದೇ ಕಾಯಿಲೆಯಿಂದ ಬಳಲುತ್ತಿಲ್ಲ ಎಂದು ಅಮಿತ್ ಶಾ ಹೇಳುವ ಮೂಲಕ ತಮ್ಮ ಆರೋಗ್ಯ ಕುರಿತು ಎದಿದ್ದ ವದಂತಿಗಳಿಗೆ ತೆರೆ ಎಳೆದಿದ್ದಾರೆ.

ಅನೇಕ ಸಾಮಾಜಿಕ ಜಾಲತಾಣ ಬಳಕೆದಾರರು ತಮ್ಮ ಆರೋಗ್ಯದ ಬಗ್ಗೆ ಇಲ್ಲ ಸಲ್ಲದ ವದಂತಿಗಳನ್ನು ಹರಡುತ್ತಿದ್ದಾರೆ. ಕೆಲವರಂತೂ ನಿಧನವಾಗಿರುವುದಾಗಿ ಪ್ರಾರ್ಥಿಸಿದ್ದಾರೆ ಎಂದು ಟ್ವೀಟರ್ ನಲ್ಲಿ ಅಮಿತ್ ಶಾ ಹೇಳಿದ್ದಾರೆ.

ಯಾವುದೇ ಕಾಯಿಲೆಯಿಂದ ಬಳಲುತ್ತಿಲ್ಲ, ಸಂಪೂರ್ಣವಾಗಿ ಆರೋಗ್ಯದಿಂದ ಇದ್ದೇನೆ ಎಂದು ಅಮಿತ್ ಶಾ ತಿಳಿಸಿದ್ದಾರೆ.

SCROLL FOR NEXT