ಕೋವಿಡ್ ಸೃಷ್ಟಿಸಿದ ಚೀನಾದಿಂದ 600 ಬಿಲಿಯನ್ ಡಾಲರ್ ಪರಿಹಾರ ಕೋರಿ ಸುಪ್ರೀಂಗೆ ಅರ್ಜಿ
ದೇಶದಲ್ಲಿ 2000ಕ್ಕೂ ಹೆಚ್ಚು ಬಲಿ ತೆಗೆದುಕೊಂಡಿರುವ ಕೊರೋನಾ ವೈರಸ್ ಹರಡುವಿಕೆಗೆ ಕಾರಣವಾಗಿರುವ ಚೀನಾದಿಂದ 600 ಬಿಲಿಯನ್ ಅಮೆರಿಕನ್ ಡಾಲರ್ ಪರಿಹಾರ ಕೋರಿ ಅಂತಾರಾಷ್ಟ್ರೀಯ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವಂತೆ...
ನವದೆಹಲಿ: ದೇಶದಲ್ಲಿ 2000ಕ್ಕೂ ಹೆಚ್ಚು ಬಲಿ ತೆಗೆದುಕೊಂಡಿರುವ ಕೊರೋನಾ ವೈರಸ್ ಹರಡುವಿಕೆಗೆ ಕಾರಣವಾಗಿರುವ ಚೀನಾದಿಂದ 600 ಬಿಲಿಯನ್ ಅಮೆರಿಕನ್ ಡಾಲರ್ ಪರಿಹಾರ ಕೋರಿ ಅಂತಾರಾಷ್ಟ್ರೀಯ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವಂತೆ ಕೇಂದ್ರಕ್ಕೆ ನಿರ್ದೇಶಿಸಬೇಕು ಎಂದು ವ್ಯಕ್ತಿಯೋರ್ವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.
ತಮಿಳುನಾಡಿನ ಮಧುರೈ ನಿವಾಸಿ ಕೆಕೆ ರಮೇಶ್ ಅವರ ಪ್ರಕಾರ, ಕೋವಿಡ್ -19 ಹುಟ್ಟಿದ್ದು ಚೀನಾ ಪ್ರಯೋಗಾಲಯದಲ್ಲಿ. ಕೋವಿಡ್- 19 ವುಹಾನ್ ನ ವೈರಾಲಜಿ ಸಂಸ್ಥೆಯಲ್ಲಿ ಜನಿಸಿದ್ದು ಎಂಬುದಕ್ಕೆ ಸದೃಢ ಸಾಕ್ಷಿಗಳಿವೆ ಎಂದು ಅವರು ಆರೋಪಿಸಿದ್ದಾರೆ.
ಅರ್ಜಿಯಲ್ಲಿ ಕೇಂದ್ರ ಸರ್ಕಾರ, ಕಾನೂನು ಸಚಿವಾಲಯ, ಆರೋಗ್ಯ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯಗಳನ್ನು ಪ್ರತಿವಾದಿಯನ್ನಾಗಿಸಿದ್ದಾರೆ.