ಮೇ.12 ರಿಂದ ರೈಲು ಸೇವೆಗಳು ಪುನಾರಂಭ
ಭಾರತೀಯ ರೈಲ್ವೆ ಪ್ರಯಾಣಿಕ ರೈಲು ಸೇವೆಗಳನ್ನು ಮೆ.12 ರಿಂದ ಕ್ರಮೇಣ ಪ್ರಾರಂಭ ಮಾಡಲಿದೆ.
ನವದೆಹಲಿ: ಭಾರತೀಯ ರೈಲ್ವೆ ಪ್ರಯಾಣಿಕ ರೈಲು ಸೇವೆಗಳನ್ನು ಮೆ.12 ರಿಂದ ಕ್ರಮೇಣ ಪ್ರಾರಂಭ ಮಾಡಲಿದೆ.
15 ಜೊತೆ ರೈಲುಗಳು ಸಂಚರಿಸಲಿದ್ದು, ನವದೆಹಲಿಯಿಂದ ದಿಬ್ರುಗರ್, ಅಗರ್ತಲಾ, ಹೌರಾ, ಪಾಟ್ನಾ, ಬಿಲಾಸ್ಪುರ್, ರಾಂಚಿ, ಭುವನೇಶ್ವರ, ಸಿಕಂದರಾಬಾದ್, ಬೆಂಗಳೂರು, ಚೆನ್ನೈ, ತಿರುವನಂತಪುರಂ, ಮಡ್ಗಾಂವ್, ಮುಂಬೈ ಸೆಂಟ್ರಲ್, ಅಹಮದಾಬಾದ್ ಮತ್ತು ಜಮ್ಮು ತಾವಿ ನಡುವೆ ಸಂಚರಿಸಲಿದೆ.
ಕೊರೋನಾ ವೈರಸ್ ಹಿನ್ನೆಲೆ ಎಲ್ಲ ಪ್ರಯಾಣಿಕ ರೈಲುಗಳ ಸಂಚಾರವನ್ನು ಮಾ.25 ರಿಂದ ರದ್ದುಗೊಳಿಸಲಾಗಿತ್ತು. ಮೇ.12 ರಿಂದ ವಿಶೇಷ ರೈಲುಗಳ ಸಂಚಾರ ಪ್ರಾರಂಭಿಸಿದ ಬಳಿಕ ರೈಲ್ವೆ ಇಲಾಖೆ ಕ್ರಮೇಣ ಹೊಸ ಮಾರ್ಗಗಳಿಗೆ ರೈಲುಗಳ ಸಂಚಾರವನ್ನು ಪ್ರಾರಂಭಿಸಲಿದೆ. ಮೇ.11 ರಂದು ಸಂಜೆ 4 ರಿಂದ ರೈಲ್ವೆ ಟಿಕೆಟ್ ಗಳನ್ನು https://www.irctc.co.in/ ನಲ್ಲಿ ಕಾಯ್ದಿರಿಸಬಹುದಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.