#ವಂದೇ ಭಾರತ್ ಮಿಷನ್: ಇಂಗ್ಲೆಂಡ್ನಿಂದ ಬೆಂಗಳೂರಿಗೆ 250 ಕನ್ನಡಿಗರು ವಾಪಸ್!
ಭಾರತ ಸರ್ಕಾರದ ಅತೀ ದೊಡ್ಡ ಏರ್ ಲಿಫ್ಟ್ ಕಾರ್ಯಾಚರಣೆ ವಂದೇ ಭಾರತ್ ಮಿಷನ್ ನಡಿಯಲ್ಲಿ ಲಂಡನ್ ನಲ್ಲಿ ನಿರಾಶ್ರಿತರಾಗಿರುವ ಸುಮಾರು 250 ಕನ್ನಡಿಗರು ಮಂಗಳವಾರ ಸ್ವದೇಶಕ್ಕೆ ವಾಪಸ್ ಆಗಲಿದ್ದಾರೆ.
ಲಂಡನ್: ಭಾರತ ಸರ್ಕಾರದ ಅತೀ ದೊಡ್ಡ ಏರ್ ಲಿಫ್ಟ್ ಕಾರ್ಯಾಚರಣೆ ವಂದೇ ಭಾರತ್ ಮಿಷನ್ ನಡಿಯಲ್ಲಿ ಲಂಡನ್ ನಲ್ಲಿ ನಿರಾಶ್ರಿತರಾಗಿರುವ ಸುಮಾರು 250 ಕನ್ನಡಿಗರು ಮಂಗಳವಾರ ಸ್ವದೇಶಕ್ಕೆ ವಾಪಸ್ ಆಗಲಿದ್ದಾರೆ.
ಮೇ 7ರಿಂದ ಆರಂಭವಾಗಿರುವ ಮೊದಲ ಹಂತದ ವಂದೇ ಭಾರತ್ ಮಿಷನ್ ಅಡಿ ನಾಳೆ ಇಂಗ್ಲೆಂಡ್ನಲ್ಲಿ ಸಿಲುಕಿರುವ ಕನ್ನಡಿಗರು ತಾಯ್ನಾಡಿಗೆ ಮರಳುತ್ತಿದ್ದಾರೆ. ಕೊರೊನಾ ಲಾಕ್ ಡೌನ್ ನಿಂದ ವಿವಿಧ ದೇಶಗಳಲ್ಲಿಸಿಲುಕಿರುವ ಭಾರತೀಯರನ್ನು ಕರೆತರಲು ವಂದೇ ಭಾರತ್ ಮಿಷನ್ ಹಮ್ಮಿಕೊಳ್ಳಲಾಗಿದ್ದು, ಭಾನುವಾರ ಇಂಗ್ಲೆಂಡ್ ನಿಂದ ಕರ್ನಾಟಕಕ್ಕೆ 250 ಕನ್ನಡಿಗರು ಬೆಂಗಳೂರಿಗೆ ಬರಲಿದ್ದಾರೆ. ಬೆಳಗ್ಗೆ ಲಂಡನ್ ನಿಂದ ಹೊರಟಿರುವ ವಿಶೇಷ ವಿಮಾನ ರಾತ್ರಿ ಬೆಂಗಳೂರಿಗೆ ಬರಲಿದೆ ಎಂದು ಭಾರತೀಯ ವಿದೇಶಾಂಗ ಇಲಾಖೆ ಮಾಹಿತಿನೀಡಿದೆ.
ಲಂಡನ್ ನಿಂದ ರಾಜ್ಯಕ್ಕೆ ಬರುವ ಕನ್ನಡಿಗರು ಉಳಿದುಕೊಳ್ಳಲು ಹೋಟೆಲ್, ರೆಸಾರ್ಟ್ ಗಳನ್ನು ಬುಕ್ ಮಾಡಲಾಗಿದ್ದು, ಎ,ಬಿ ಮತ್ತು ಸಿ ಗ್ರೇಡ್ ಗಳಾಗಿ ವಿಂಗಡಣೆ ಮಾಡಲಾಗಿದ್ದು, ಎ ಗ್ರೇಡ್ ಹೊಂದಿರುವವರು ರಾಜೀವ್ ಗಾಂಧಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತದೆ. ಬಿ ಮತ್ತು ಸಿ ಗ್ರೇಡ್ ಹೊಂದಿರುವವರು ಹೋಟೆಲ್ ಮತ್ತು ರೆಸಾರ್ಟ್ ಗಳಲ್ಲಿ ಕ್ವಾರಂಟೈನ್ ಮಾಡಲಾಗುತ್ತಿದ್ದು, ತಗುಲುವ ವೆಚ್ಚವನ್ನು ಅವರೆ ಭರಿಸಬೇಕಿದೆ.
ಲಾಕ್ಡೌನ್ನಿಂದ ವಿವಿಧ ದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲು ವಂದೇ ಭಾರತ್ ಮಿಷನ್ ಹಮ್ಮಿಕೊಳ್ಳಲಾಗಿದ್ದು, ಮೊದಲ ಹಂತದ ವಂದೇ ಭಾರತ್ ಮಿಷನ್ ಮೇ 13ಕ್ಕೆ ಮುಕ್ತಾಯವಾಗಲಿದ್ದು, ಮೇ 15ರಿಂದ ಎರಡನೇ ಹಂತದ ವಂದೇ ಭಾರತ್ ಮಿಷನ್ ಆರಂಭವಾಗಲಿದೆ. ಮೊದಲ ಹಂತದ ರೀತಿಯಲ್ಲೇ ಎರಡನೇ ಹಂತದಲ್ಲೂ ಸುಮಾರು 15 ಸಾವಿರ ಜನರನ್ನು ಕರೆತರಲಾಗುವುದು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.