ದೇಶ

ಮನ ಮೋಹನ್ ಸಿಂಗ್ ಆರೋಗ್ಯ ಸ್ಥಿರ, ಚಿಕಿತ್ಸೆಗೆ ಸ್ಪಂದನೆ: ಏಮ್ಸ್ ವೈದ್ಯರು

Shilpa D

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈಯನ್ಸ್ (ಏಮ್ಸ್) ಆಸ್ಪತ್ರೆ ಮೂಲಗಳು ತಿಳಿಸಿದೆ.

ಖ್ಯಾತ ಅರ್ಥಶಾಸ್ತ್ರಜ್ಞ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಡಾ. ಮನಮನೋಹನ್ ಸಿಂಗ್ ಅವರ ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನೆಲೆಯಲ್ಲಿ ಭಾನುವಾರ ರಾತ್ರಿ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಭಾನುವಾರ ರಾತ್ರಿ ಎದೆ ನೋವು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ 87 ವರ್ಷದ ಮನಮೋಹನ್ ಸಿಂಗ್ ಅವರನ್ನು ಆಸ್ಪತ್ರೆಗೆ ದಾಖಲಾಖಿಸಲಾಗಿತ್ತು. ಈಗ ಎದೆರೋಗಗಳ ವಿಭಾಗದಲ್ಲಿ ನಿಗಾದಲ್ಲಿರಿಸಲಾಗಿದೆ ಎಂಬುದನ್ನು ಅಧಿಕಾರಿಗಳು ತಿಳಿಸಿದ್ದಾರೆ. 2009ನೇ ಇಸವಿಯಲ್ಲಿ ಮನಮೋಹನ್ ಸಿಂಗ್ ಹೃದಯದ ಯಶಸ್ವಿ ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

SCROLL FOR NEXT