ಪಿ ಚಿದಂಬರಂ 
ದೇಶ

ಕೊರೋನಾ ವೈರಸ್: ಕೇಂದ್ರದ ಸಾಲ ತೀರ್ಮಾನಕ್ಕೆ ಪಿ ಚಿದಂಬರಂ ಬೆಂಬಲ

ಕೇಂದ್ರ ಸರ್ಕಾರದ ಪ್ರತೀ ನಡೆಯನ್ನೂ ಟೀಕಿಸುತ್ತಿದ್ದ ಮಾಜಿ ವಿತ್ತ ಸಚಿವ ಪಿ ಚಿದಂಬರಂ ಮೊದಲ ಬಾರಿಗೆ ಕೇಂದ್ರ ಸರ್ಕಾರದ ತೀರ್ಮಾನವನ್ನು ಸ್ವಾಗತಿಸಿದ್ದಾರೆ.

ನವದೆಹಲಿ: ಕೇಂದ್ರ ಸರ್ಕಾರದ ಪ್ರತೀ ನಡೆಯನ್ನೂ ಟೀಕಿಸುತ್ತಿದ್ದ ಮಾಜಿ ವಿತ್ತ ಸಚಿವ ಪಿ ಚಿದಂಬರಂ ಮೊದಲ ಬಾರಿಗೆ ಕೇಂದ್ರ ಸರ್ಕಾರದ ತೀರ್ಮಾನವನ್ನು ಸ್ವಾಗತಿಸಿದ್ದಾರೆ.

ಹೌದು.. ಕೇಂದ್ರದ ಆರ್ಥಿಕ ನೀತಿ ಸದಾ ವಿರೋಧ ಮಾಡುತ್ತಿದ್ದ ಮಾಜಿ ಹಣಕಾಸು ಸಚಿವ ಚಿದಂಬರಂ ಇದೀಗ ಸಾಲ ತೀರ್ಮಾನಕ್ಕೆ ಬೆಂಬಲ, ಸಹಮತ ವ್ಯಕ್ತಪಡಿಸಿದ್ದಾರೆ. ಕೊರೋನಾ ವೈರಸ್ ಸಂಕಷ್ಟ ನಿವಾರಣೆಗಾಗಿ ಕೇಂದ್ರ ಸರ್ಕಾರ ಹೆಚ್ಚುವರಿಯಾಗಿ 4.2 ಲಕ್ಷ ಕೋಟಿ ರುಪಾಯಿ ಸಾಲ ಮಾಡಲು ಹೊರಟಿರುವ ಕ್ರಮವನ್ನು ಕಾಂಗ್ರೆಸ್ ನಾಯಕರೂ ಆಗಿರುವ ಚಿದು ಸ್ವಾಗತಿಸಿದ್ದಾರೆ.

ಆದರೆ ಈ ಹಣವನ್ನು ಬಡವರಿಗೆ ಪರಿಹಾರ ಒದಗಿಸಲು ಮತ್ತು ಆರ್ಥಿಕತೆಗೆ ಮತ್ತೆ ಚೈತನ್ಯ ನೀಡಲು ಮಾತ್ರ ಬಳಸಬೇಕು ಎಂದು ಅವರು ಒತ್ತಾಯ ಮಾಡಿದ್ದಾರೆ.

ನಾವು ಮನವಿ ಮಾಡಿದ ಮೇಲೆ ಸರ್ಕಾರವು ಅಂತಿಮವಾಗಿ ಹೆಚ್ಚುವರಿ 4.2 ಲಕ್ಷ ಕೋಟಿ ರುಪಾಯಿ ಹೆಚ್ಚುವರಿಯಾಗಿ ಸಾಲ ಮಾಡಲು ನಿರ್ಧರಿಸಿದೆ. ಆದರೂ ಕೇಂದ್ರ ಸರ್ಕಾರದ ತೀರ್ಮಾನವನ್ನು ಸ್ವಾಗತಿಸುವುದಾಗಿಚಿದಂಬರಂ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿಗೆ ಸಾಲ ಮಾಡಿದರೆ ಮಾತ್ರ ಪ್ರಯೋಜನವಿಲ್ಲ ಎಂದು ಭಾವಿಸಬೇಕಿಲ್ಲ . ಆ ಹಣವನ್ನು ಬಡವರಿಗೆ ಪರಿಹಾರ ಒದಗಿಸಲು ಹಾಗೂ ಆರ್ಥಿಕತೆಗೆ ಮತ್ತೆ ಚಾಲನೆ ನೀಡಲು ಬಳಸಿದರೆ ಅನುಕೂಲವಾಗಲಿದೆ ಎಂದೂ ಅವರು ಕಿವಿಮಾತು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್