ದೇಶ

ಕೊವಿಡ್-19 ಕಂಟೈನ್ ಮೆಂಟ್ ತಂತ್ರ ಬಲಪಡಿಸುವ ಕುರಿತು ಸಿಎಂಗಳ ಜತೆ ಪ್ರಧಾನಿ ಮೋದಿ ಚರ್ಚೆ

Lingaraj Badiger

ನವದೆಹಲಿ: ದೇಶದಲ್ಲಿ ಮಹಾಮಾರಿ ಕೊರೋನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕೊವಿಡ್-19 ಕಂಟೈನ್ ಮೆಂಟ್ ತಂತ್ರ ಬಲಪಡಿಸುವ ಕುರಿತು ಮತ್ತು ಆರ್ಥಿಕ ಚಟುವಚಿಕೆ ಆರಂಭಿಸುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಎಲ್ಲ ರಾಜ್ಟಗಳ ಮುಖ್ಯಮಂತ್ರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು.

ದೇಶಾದ್ಯಂತ 54 ದಿನಗಳ ಲಾಕ್ ಡೌನ್ ಮೇ 17ಕ್ಕೆ ಅಂತ್ಯವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು ಐದನೇ ಬಾರಿ ಮುಖ್ಯಮಂತ್ರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದ ಪ್ರಧಾನಿ, ಮೇ 4 ರ ನಂತರ ದೇಶದಲ್ಲಿ ದೊಡ್ಡ ಪ್ರಮಾಣದ ವಲಸೆ ಕಾರ್ಮಿಕರು ನಗರಗಳಿಂದ ಗ್ರಾಮೀಣ ಪ್ರದೇಶಕ್ಕೆ ಹೋಗಿದ್ದು, ವಲಸೆ ಕಾರ್ಮಿಕರಿಂದ ಉಂಟಾದ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.

ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ಭಾರತ ತೆಗೆದುಕೊಂಡಿರುವ ಕ್ರಮಗಳಿಂದ ಯಾವುದೇ ಕಾರಣಕ್ಕೂ ಹಿಂದೆ ಸರಿಯಬಾರದು ಎಂದು ಪ್ರಧಾನಿ ಮೋದಿ ಪ್ರತಿಪಾದಿಸಿದ್ದಾರೆ.

ಕೊರೋನಾ ವಿರುದ್ಧದ ಹೋರಾಟದಲ್ಲಿ ಭಾರತ ಯಶಸ್ಸು ಕಂಡಿದ್ದು, ಸಾಮಾಜಿಕ ಅಂತರದಂತಹ ಕ್ರಮಗಳನ್ನು ತೆಗೆದುಕೊಳ್ಳದಿದ್ದಲ್ಲಿ ಮತ್ತಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಪ್ರಧಾನಿ ಎಚ್ಚರಿಸಿದ್ದಾರೆ.

ದೇಶದಲ್ಲಿ ಆರ್ಥಿಕ ಚಟುವಟಿಕೆಯನ್ನು ಹೇಗೆ ಮರು ಆರಂಭಿಸಬೇಕು ಎಂಬುದು ಇಂದಿನ ಸಭೆಯ ಪ್ರಮುಖ ಕಾರ್ಯಸೂಚಿಯಾಗಿತ್ತು ಎಂದು ಮೂಲಗಳು ತಿಳಿಸಿವೆ.

ಸಭೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾಗವಹಿಸಿದ್ದರು.

SCROLL FOR NEXT