ದೇಶ

ಕಾಶ್ಮೀರದಲ್ಲಿ 4ಜಿ ಇಂಟರ್ನೆಟ್: ಮನವಿ ಪರಿಗಣನೆಗೆ ಉನ್ನತ ಸಮಿತಿ ಸ್ಥಾಪಿಸಿ ಎಂದ ಸುಪ್ರೀಂ ಕೋರ್ಟ್

Raghavendra Adiga

ನವದೆಹಲಿ: ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ 4ಜಿಇಂಟರ್ನೆಟ್ ಸೇವೆಗಳನ್ನು ಮರುಸ್ಥಾಪಿಸಲು ಕೋರಿ ಮನವಿಗಳ ಪರಿಗಣನೆಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಕಾರ್ಯದರ್ಶಿ ನೇತೃತ್ವದ ಉನ್ನತ-ಸಮಿತಿಯೊಂದನ್ನು ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶಿಸಿದೆ.

ನ್ಯಾಯಮೂರ್ತಿಗಳಾದ ಎನ್ ವಿ ರಮಣ,  ಆರ್. ಸುಭಾಷ್ ರೆಡ್ಡಿ ಮತ್ತು ಬಿ ಆರ್ ಗವಾಯಿ ಅವರನ್ನೊಳಗೊಂಡ ನ್ಯಾಯಪೀಠವು ಕೇಂದ್ರಾಡಳಿತ ಪ್ರದೇಶದ ಮುಖ್ಯ ಕಾರ್ಯದರ್ಶಿ ಮತ್ತು ಸಂವಹನ ಸಚಿವಾಲಯದ ಕಾರ್ಯದರ್ಶಿಯನ್ನು  ಒಳಗೊಂಡ ಸಮಿತಿ 4ಜಿ ಇಂಟರ್ನೆಟ್ ವೇಗವನ್ನು ಪುನಃಸ್ಥಾಪಿಸಲು ಕೋರಿ ಅರ್ಜಿದಾರರ ಬೇಡಿಕೆಗಳನ್ನು ಪರಿಶೀಲಿಸಬೇಕು ಎಂದಿದೆ.

ಫೌಂಡೇಶನ್ ಫಾರ್ ಮೀಡಿಯಾ ಪ್ರೊಫೆಷನಲ್ಸ್, ಸೋಯೀಬ್ ಖುರೇಷಿ ಮತ್ತು ಜಮ್ಮು ಮತ್ತು ಕಾಶ್ಮೀರದ ಖಾಸಗಿ ಶಾಲೆಗಳ ಸಂಘ ಸಲ್ಲಿಸಿದ್ದ ಮನವಿಗಳ ತೀರ್ಪು ಓದಿದ ಕೋರ್ಟ್ ರಾಷ್ಟ್ರೀಯ ಭದ್ರತೆ ಮತ್ತು ಮಾನವ ಹಕ್ಕುಗಳ ನಡುವೆ ಸಮತೋಲನ ಕಾಯ್ದುಕೊಳ್ಲುವಿಕೆಯನ್ನು ಖಚಿತಪಡಿಸಿಕೊಳ್ಲಬೇಕಿದೆ ಎಂದು ಅಭಿಪ್ರಾಯಪಟ್ಟಿತು. 

SCROLL FOR NEXT