ಹಾವು 
ದೇಶ

ಎಟಿಎಂ ಮಶೀನ್ ನಲ್ಲಿ ಹಾವು ಪ್ರತ್ಯಕ್ಷ, ವಿಡಿಯೋ ವೈರಲ್!

ಉದ್ದದ ಹಾವೊಂದು ಘಾಸಿಯಾಬಾದ್‌ ಐಸಿಐಸಿಐ ಬ್ಯಾಂಕ್‌ನ ಎಟಿಎಂ ಮಶೀನ್‌ಗೆ ಒಳಗಡೆ ಸೇರಿಕೊಂಡಿರುವ ಸಂಗತಿ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು, ಈ ದೃಶ್ಯವನ್ನು ಮೊಬೈಲ್‌ ಮೂಲಕ ಚಿತ್ರೀಕರಣ ಮಾಡಲಾಗಿದೆ.

ಘಾಸಿಯಾಬಾದ್‌: ಉದ್ದದ ಹಾವೊಂದು ಘಾಸಿಯಾಬಾದ್‌ ಐಸಿಐಸಿಐ ಬ್ಯಾಂಕ್‌ನ ಎಟಿಎಂ ಮಶೀನ್‌ಗೆ ಒಳಗಡೆ ಸೇರಿಕೊಂಡಿರುವ ಸಂಗತಿ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು, ಈ ದೃಶ್ಯವನ್ನು ಮೊಬೈಲ್‌ ಮೂಲಕ ಚಿತ್ರೀಕರಣ ಮಾಡಲಾಗಿದೆ. 

ಕಣ್ಣು ನಿಬ್ಬೆರಗಾಗಿ ನೋಡುವ ಈ ವಿಡಿಯೋ ಸಾಮಾಜಿಕ ತಾಣದಲ್ಲಿ ಸಖತ್‌ ವೈರಲ್‌ ಆಗಿದೆ. ಉತ್ತರ ಪ್ರದೇಶದ ಘಾಸಿಯಾಬಾದ್‌ ಐಸಿಐಸಿಐ ಬ್ಯಾಂಕ್‌ನ ಎಟಿಎಂ ಕೆಐಓಎಸ್‌ಕೆಯಲ್ಲಿ ವಿಡಿಯೋ ತೆಗೆಯಲಾಗಿದೆ. ಹಾವು ಎಟಿಎಂ ಒಳಗಡೆ ಆಕಸ್ಮಿಕವಾಗಿ ನುಗ್ಗಿದೆ. ಇದನ್ನು ನೋಡಿದ ಭದ್ರತಾ ಸಿಬ್ಬಂದಿ ಎಟಿಎಂ ಬಾಗಿಲನ್ನು ಮುಚ್ಚಿದ್ದಾರೆ. ಇದರಿಂದ ಹಾವು ಹೊರಗಡೆ ಬರಲಾಗದೆ ಎಟಿಎಂ ಮಶೀನ್‌ ಒಳಗಡೆ ಸೇರಿಕೊಂಡಿದೆ.

 ಘಾಸಿಯಾಬಾದ್‌ ನಗರದ ಗೋವಿಂದಪುರಿಯಲ್ಲಿ ಈ ಘಟನೆ ನಡೆದಿದೆ. ಎಟಿಎಂ ಒಳಗಡೆ ಹಾವಿನ ಚಿತ್ರೀಕರಣದ ವಿಡಿಯೋ ಸೋಶಿಯಲ್‌ ಮೀಡಿಯಾ ಫೇಸ್‌ಬುಕ್‌, ಟ್ವಿಟರ್‌ ಹಾಗೂ ಇನ್‌ಸ್ಟಾಗ್ರಾಮ್‌ನಲ್ಲಿ ದೊಡ್ಡ ಸಂಖ್ಯೆಯಲ್ಲಿ ಶೇರ್ ಮಾಡಲಾಗಿದ್ದು, ಸಿಕ್ಕಾಪಟ್ಟೆ ವೈರಲ್‌ ಆಗಿದೆ. ಈ ವಿಡಿಯೋವನ್ನು ನೀವು ಕೆಳಗಿನ ಟ್ವಿಟರ್ ಲಿಂಕ್‌ ಮೂಲಕ ನೋಡಬಹುದಾಗಿದೆ.

ಈ ವಿಡಿಯೋವನ್ನು ಸಾವಿರಾರು ಮಂದಿ ವೀಕ್ಷಿಸಿದ್ದು, ನೂರಾರು ಕಾಮೆಂಟ್‌ಗಳು ಬಂದಿವೆ. "ಇದು ಭಯಾನಕ" ಎಂದು ಟ್ವಿಟರ್‌ ಬಳಕೆದಾರರೊಬ್ಬರು ಶೀರ್ಷಿಕೆಯೊಂದಿಗೆ ವಿಡಿಯೋ ಪೋಸ್ಟ್‌ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು

ಚಿಂತಾಮಣಿಯ Dictator, ನಿನ್ನ ವಿರುದ್ಧ ಸಮರ ನಿರಂತರ: ಎಂಸಿ ಸುಧಾಕರ್ ವಿರುದ್ಧ ಪ್ರದೀಪ್ ಈಶ್ವರ್ ಮತ್ತೆ ಕಿಡಿ

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ, ಕಾರು ಆಪೋಷನ, ಕೂದಲೆಳೆ ಅಂತರದಲ್ಲಿ ಚಾಲಕ ಬಚಾವ್-Video