ನವದೆಹಲಿ: ಮಾಜಿ ಪ್ರಧಾನಿ ಡಾ. ಡಾ.ಮನಮೋಹನ್ ಸಿಂಗ್ ದೆಹಲಿಯ ಏಮ್ಸ್ ನಿಂದ ಡಿಸ್ಚಾರ್ಜ್ ಆಗಿದ್ದಾರೆ.
ಭಾನುವಾರ ಸಂಜೆ ಎದೆನೋವು ಕಾಣಿಸಿಕೊಂಡಿದ್ದ ಕಾರಣ ಸಿಂಗ್ರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ವಿಶೇಷ ವಾರ್ಡಿನಲ್ಲಿ ಚಿಕಿತ್ಸೆ ನೀಡಿದ ಬಳಿಕ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಏಮ್ಸ್ ವೈದ್ಯರು ಪ್ರಕಟಣೆ ನೀಡಿದ್ದರು.
ಸಿಂಗ್ ಅವರಿಗೆ ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗಿತ್ತು. ನಿತೀಶ್ ನಾಯ್ಕ್ ನೇತೃತ್ವದ ವೈದ್ಯರ ತಂಡ ಅವರ ಚಿಕಿತ್ಸೆ ಮೇಲ್ವಿಚಾರಣೆ ವಹಿಸಿತ್ತು.
ಇದೀಗ ವೈದ್ಯಕೀಯ ಸಲಹೆ ಮೇಲೆ ಸಿಂಗ್ ಅವರನ್ನು ಆಸ್ಪತ್ರೆಯಿಂದ ಬೀಡುಗಡೆ ಮಾಡಲಾಗಿದೆ. 2009ರಲ್ಲಿ ಡಾ. ಸಿಂಗ್ಗೆ ಏಮ್ಸ್ನಲ್ಲೇ ಎದೆನೋವಿಗಾಗಿ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು.