ಮಧ್ಯಪ್ರದೇಶದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ 
ದೇಶ

'ಸಿಂಗಂ' ರೀತಿ ಸ್ಟಂಟ್ ಮಾಡಲು ಹೋದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗೆ ಬಿತ್ತು ಭಾರಿ ದಂಡ!

ಅಜಯ್ ದೇವಗನ್ ಅಭಿನಯದ 'ಸಿಂಗಂ' ಚಿತ್ರದಲ್ಲಿನ ಜನಪ್ರಿಯ ಸಾಹಸ ದೃಶ್ಯದಂತೆ ಸ್ಟಂಟ್ ಮಾಡಲು ಹೋಗಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬರು ಎಡವಟ್ಟು ಮಾಡಿಕೊಂಡಿದ್ದಾರೆ. 

ಭೂಪಾಲ್: ಅಜಯ್ ದೇವಗನ್ ಅಭಿನಯದ 'ಸಿಂಗಂ' ಚಿತ್ರದಲ್ಲಿನ ಜನಪ್ರಿಯ ಸಾಹಸ ದೃಶ್ಯದಂತೆ ಸ್ಟಂಟ್ ಮಾಡಲು ಹೋಗಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬರು ಎಡವಟ್ಟು ಮಾಡಿಕೊಂಡಿದ್ದಾರೆ. 

ಖಾಕಿ ತೊಟ್ಟು ಚಲಿಸುತ್ತಿರುವ ಎರಡು ಕಾರುಗಳ ಮೇಲೆ ಸಮತೋಲನವಾಗಿ ನಿಲ್ಲುವ ಡೇರ್ ಡೆವಿಲ್ ಸಾಹಸ ಕೆಲಸ ಮಾಡಿದ   ಮಧ್ಯಪ್ರದೇಶದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬರಿಗೆ 5 ಸಾವಿರ ರೂ. ದಂಡ ವಿಧಿಸಲಾಗಿದೆ. 

ದಮೋಹ್ ಜಿಲ್ಲೆ ನರಸಿಂಗ್ ಗಢ ಪೊಲೀಸ್ ಠಾಣೆ ಇನ್ ಚಾರ್ಜ್ ಮನೋಜ್  ಯಾದವ್ ಈ ರೀತಿಯ ಎಡವಟ್ಟು ಮಾಡಿಕೊಂಡ ಅಧಿಕಾರಿ. ಮುಂದೆ ಈ ರೀತಿಯ ಯಾವುದೇ ದುಸ್ಸಾಹಸಕ್ಕೆ ಮುಂದಾಗದಂತೆ ಎಚ್ಚರಿಕೆ ನೀಡಲಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. 

ಮನೋಜ್ ಯಾದವ್ ಅವರ  ಸ್ಟಂಟ್  ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಹಿರಿಯ ಪೊಲೀಸ್ ಅಧಿಕಾರಿಗಳು, ಯುವ ಜನತೆಗೆ ಇದು ಕೆಟ್ಟ ಸಂದೇಶ ರವಾನಿಸುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ವಿಚಾರದ ಬಗ್ಗೆ ತನಿಖೆ ನಡೆಸುವಂತೆ ಪೊಲೀಸ್ ಮಹಾನಿರ್ದೇಶಕ ಸಾಗರ್  ರಾಂಘೆ ಅನಿಲ್ ಶರ್ಮಾ ಪೊಲೀಸ್ ಅಧೀಕ್ಷಕ ಹೇಮಂತ್  ಚೌಹ್ಹಾಣ್ ಅವರಿಗೆ ನಿರ್ದೇಶಿಸಿದ್ದಾರೆ. ವಿಚಾರಣೆ ಬಳಿಕ ಚೌಹ್ಹಾಣ್  ಸಬ್ ಇನ್ಸ್ ಪೆಕ್ಟ್ ರ್ ಮೇಲೆ 5 ಸಾವಿರ ರೂ. ದಂಡ ವಿಧಿಸಿದ್ದು, ಮುಂದೆ ಈ ರೀತಿಯ ಮಾಡದಂತೆ ನಿರ್ದೇಶನ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!