ದೇಶ

ಉತ್ತರ ಪ್ರದೇಶ ಮೂಲದ ವಲಸೆ ಕಾರ್ಮಿಕರು ಅಪಘಾತದಲ್ಲಿ ಸಾವು: ಸರ್ಕಾರದಿಂದ ತಲಾ 2 ಲಕ್ಷ ರೂ. ಪರಿಹಾರ

Sumana Upadhyaya

ಲಕ್ನೊ: ಮಧ್ಯ ಪ್ರದೇಶದ ಗುನಾ ಎಂಬಲ್ಲಿ ಕಳೆದ ರಾತ್ರಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ವಲಸೆ ಕಾರ್ಮಿಕರ ಕುಟುಂಬಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಗಂಭೀರ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಪ್ರಕಟಿಸಿದ್ದಾರೆ.

ಮೃತ ಕಾರ್ಮಿಕರು ಉತ್ತರ ಪ್ರದೇಶ ಮೂಲದವರಾಗಿದ್ದು ಅವರ ದೇಹಗಳನ್ನು ಕುಟುಂಬಸ್ಥರ ಬಳಿ ತರಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಕಾರ್ಯಾಲಯ ತಿಳಿಸಿದೆ.

ಕಳೆದ ರಾತ್ರಿ ಎರಡು ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕಾರ್ಮಿಕರಲ್ಲಿ ಮುಜಾಫರ್ ನಗರದಲ್ಲಿ ಮೃತಪಟ್ಟವರು ಬಿಹಾರ ಮೂಲದವರಾಗಿದ್ದಾರೆ. ಇವರ ಕುಟುಂಬಸ್ಥರು, ಎಲ್ಲಿಂದ ಎಲ್ಲಿಗೆ ಹೋಗುತ್ತಿದ್ದರು ಎಂಬ ವಿವರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇಲ್ಲಿ ಆರು ಮಂದಿ ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡವರನ್ನು ಮೀರತ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಮಾಡಿ ಸ್ಥಳದಲ್ಲಿಯೇ ವಾಹನ ಬಿಟ್ಟು ಚಾಲಕ ಪರಾರಿಯಾಗಿದ್ದು ನಿರ್ಲಕ್ಷ್ಯತನದ ಚಾಲನೆ ಕೇಸನ್ನು ಚಾಲಕನ ವಿರುದ್ಧ ದಾಖಲಿಸಲಾಗಿದೆ. ಬಸ್ಸಿನಲ್ಲಿ ಈ ಸಂದರ್ಭದಲ್ಲಿ ಯಾರೂ ಇರಲಿಲ್ಲ ಎಂದು ಮುಜಾಫರ್ ನಗರದ ಕೊಟ್ವಾಲಿ ಪೊಲೀಸ್ ಠಾಣೆಯ ಅಧಿಕಾರಿ ಅನಿಲ್ ಕಪರ್ವಾನ್ ತಿಳಿಸಿದ್ದಾರೆ.

SCROLL FOR NEXT