ದೇಶ

ವಲಸೆ ಕಾರ್ಮಿಕರ ಬಗ್ಗೆ ಜವಾಬ್ದಾರಿಯಿಂದ ವರ್ತಿಸದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಸಿಎಂಗೆ ಮಾಯಾವತಿ ಆಗ್ರಹ

Sumana Upadhyaya

ಲಕ್ನೊ: ಉತ್ತರ ಪ್ರದೇಶದ ಔರೈಯಾ ಬಳಿ ಶನಿವಾರ ನಸುಕಿನ ಜಾವ ಟ್ರಕ್ ಗಳು ಮುಖಾಮುಖಿ ಡಿಕ್ಕಿಯಾಗಿ 24 ಮಂದಿ ವಲಸೆ ಕಾರ್ಮಿಕರು ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ ಬಿಎಸ್ ಪಿ ನಾಯಕಿ ಮಾಯಾವತಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟ ಮತ್ತು ಗಾಯಗೊಂಡವರ ಕುಟುಂಬಗಳಿಗೆ ಸೂಕ್ತ ಹಣಕಾಸು ನೆರವು ನೀಡಬೇಕೆಂದು ಸಹ ಒತ್ತಾಯಿಸಿದ್ದಾರೆ.

ಉತ್ತರ ಪ್ರದೇಶಕ್ಕೆ ಬರುವ ಮತ್ತು ಈ ರಾಜ್ಯದ ಮೂಲಕ ಹಾದುಹೋಗುವ ವಲಸೆ ಕಾರ್ಮಿಕರಿಗೆ ಆಹಾರ, ಸಾರಿಗೆ ಮತ್ತು ಆಶ್ರಯ ವ್ಯವಸ್ಥೆಯನ್ನು ಅಧಿಕಾರಿಗಳು ಮಾಡಬೇಕು ಎಂದು ಮುಖ್ಯಮಂತ್ರಿಗಳು ಆದೇಶ ನೀಡಿದ್ದರು. ಆದರೆ ಇಲ್ಲಿ ಮುಖ್ಯಮಂತ್ರಿಗಳ ಆದೇಶವನ್ನು ಅಧಿಕಾರಿಗಳು ಜವಾಬ್ದಾರಿಯಿಂದ ಪಾಲಿಸಿಲ್ಲ ಎಂಬುದು ಸ್ಪಷ್ಟವಾಗಿದೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳನ್ನೇ ಇಲ್ಲಿ ಹೊಣೆಯಾಗಿಸಬೇಕು ಎಂದು ಮಾಯಾವತಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

SCROLL FOR NEXT