ನಿರ್ಮಲಾ ಸೀತಾರಾಮನ್ 
ದೇಶ

ಕೊರೋನಾ ವೈರಸ್ ಲಾಕ್ ಡೌನ್: ಇಂದು ಸಂಜೆ 4ಕ್ಕೆ ಮತ್ತೆ ಕೇಂದ್ರ ವಿತ್ತ ಸಚಿವರಿಂದ ಸುದ್ದಿಗೋಷ್ಠಿ

ಕೊರೋನಾ ವೈರಸ್ ಲಾಕ್ ಡೌನ್ ಹಿನ್ನಲೆಯಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಜೆ 4 ಗಂಟೆಗೆ ಸುದ್ದಿಗೋಷ್ಠಿ ಕರೆದಿದ್ದು ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ.

ನವದೆಹಲಿ: ಕೊರೋನಾ ವೈರಸ್ ಲಾಕ್ ಡೌನ್ ಹಿನ್ನಲೆಯಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಜೆ 4 ಗಂಟೆಗೆ ಸುದ್ದಿಗೋಷ್ಠಿ ಕರೆದಿದ್ದು ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ.

ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿದ್ದ 20 ಲಕ್ಷ ಕೋಟಿ ಪ್ಯಾಕೇಜ್ ಕುರಿತಂತೆ ಈ ಹಿಂದೆ ಸುದೀರ್ಘ ಮೂರು ಹಂತಗಳ ಮಾಹಿತಿ ನೀಡಿದ್ದ ನಿರ್ಮಲಾ ಸೀತಾರಾಮನ್ ಅವರು ಇಂದು ಮತ್ತೆ ಸುದ್ದಿಗೋಷ್ಠಿ ಕರೆದಿರುವುದು ಕುತೂಹಲಕ್ಕೆ ಕಾರಣವಾಗಿದೆ. ಇಂದು  ಸಂಜೆ 4 ಗಂಟೆಗೆ ನಿರ್ಮಲಾ ಸೀತಾರಾಮನ್ ಅವರು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಇನ್ನು ನಿನ್ನೆ ನಡೆದ ಸುದ್ದಿಗೋಷ್ಠಿಯಲ್ಲಿ ನಿರ್ಮಲಾ ಸೀತಾರಾಮನ್ ಅವರು, ಮೂರನೇ ಕಂತಿನ ಪ್ಯಾಕೇಜ್ ವಿವರಗಳನ್ನು ನೀಡಿದ್ದರು. ಪ್ಯಾಕೇಜ್ ನಲ್ಲಿ ಕೃಷಿ ಮೂಲ ಸೌಕರ್ಯ ಅಭಿವದ್ಧಿ ಸೇರಿದಂತೆ ಒಟ್ಟು 17 ಮಹತ್ವದ ಅಂಶಗಳ ಮಾಹಿತಿ ನೀಡಿದ್ದರು. ಪ್ರಮುಖವಾಗಿ ಕೃಷಿ, ಸಂಬಂಧಿತ  ಕ್ಷೇತ್ರಗಳಲ್ಲಿ ಚೇತರಿಕೆ ಸಾಧ್ಯವಾಗುವಂತಹ ಕ್ರಮಗಳನ್ನು ಅವರು ಘೋಷಿಸಿದ್ದರು. ಕೃಷಿವಲಯದಲ್ಲಿ ಮೂಲಸೌಕರ್ಯ ಸುಧಾರಿಸಲು 1 ಲಕ್ಷ ಕೋಟಿ ರೂ.ಗಳ ನಿಧಿ ಸ್ಥಾಪಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದರು. ಅಂತೆಯೇ ಲಾಕ್‌ಡೌನ್ ಅವಧಿಯಲ್ಲಿ ರೈತರ ಖಾತೆಗಳಿಗೆ 18,730  ಕೋಟಿ ರೂ ಹಣ ಜಮೆ ಮಾಡುವುದರೊಂದಿಗೆ, ರೈತರಿಂದ 74,300 ಕೋಟಿ ರೂ. ಕೃಷಿ ಉತ್ಪನ್ನಗಳನ್ನು ಖರೀಸಿರುವುದಾಗಿ ಹೇಳಿದ್ದಾರೆ ಕೃಷಿ, ಮೀನುಗಾರಿಕೆ, ಪಶುಸಂವರ್ಧನೆ, ಡೈರಿ ಮತ್ತು ಆಹಾರ ಸಂಸ್ಕರಣೆ ರಂಗಗಳಿಗೆ ಉತ್ತೇಜನ ನೀಡುವ ಕ್ರಮಗಳನ್ನು ಪ್ರಕಟಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT