ಸಂಗ್ರಹ ಚಿತ್ರ 
ದೇಶ

ಕೊರೋನಾ ವೈರಸ್'ನಿಂದ ಮುಕ್ತಗೊಂಡ ಕಾರ್ಗಿಲ್!

ಲಡಾಖ್'ನ ಕಾರ್ಗಿಲ್ ಇದೀಗ ಕೊರೋನಾ ವೈರಸ್ ನಿಂದ ಮುಕ್ತಗೊಂಡಿದೆ ಎಂದು ಅಧಿಕಾರಿಗಳು ಶನಿವಾರ ಮಾಹಿತಿ ನೀಡಿದ್ದಾರೆ. 

ಲೇಹ್: ಲಡಾಖ್'ನ ಕಾರ್ಗಿಲ್ ಇದೀಗ ಕೊರೋನಾ ವೈರಸ್ ನಿಂದ ಮುಕ್ತಗೊಂಡಿದೆ ಎಂದು ಅಧಿಕಾರಿಗಳು ಶನಿವಾರ ಮಾಹಿತಿ ನೀಡಿದ್ದಾರೆ. 

ಕೇಂದ್ರೀಯ ಆಡಳಿತ ಪ್ರದೇಶದ ಲಡಾಖ್'ನ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಆಯುಕ್ತ, ಕಾರ್ಯದರ್ಶಿ ರಿಗ್ಜಿನ್ ಸಂಫೇಲ್ ಅವರು ಈ ಕುರಿತು ಅಧಿಕೃತ ಮಾಹಿತಿ ನೀಡಿದ್ದಾರೆ. 

ಕೊರೋನಾ ಚಿಕಿತ್ಸೆಗಾಗಿಯೇ ನೇಮಕ ಮಾಡಲಾಗಿದ್ದ ಆಸ್ಪತ್ರೆಯಲ್ಲಿ 2 ವರ್ಷದ ಬಾಲಕ ಸೇರಿ ಇಬ್ಬರು ಸೋಂಕಿತರು ಗುಣಮುಖರಾಗಿ, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇದೀಗ ಕಾರ್ಗಿಲ್ ಕೊರೋನಾದಿಂದ ಮುಕ್ತಗೊಂಡಿದೆ ಎಂದು ಹೇಳಿದ್ದಾರೆ. 

ಈ ಹಿಂದೆ ಕಾರ್ಗಿಲ್ ನಲ್ಲಿ 6 ಮಂದಿಯಲ್ಲಿ ಸೋಂಕು ಪತ್ತೆಯಾಗಿತ್ತು. ಇದೀಗ ಎಲ್ಲಾ ಸೋಂಕಿತರೂ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಸ್ರೇಲ್ ವೈಮಾನಿಕ ದಾಳಿಗೆ ತತ್ತರಿಸಿದ ಲೆಬನಾನ್: 16 ಮಂದಿ ಬಲಿ; ಅಮೆರಿಕ-ಇರಾನ್ ಶಾಂತಿ ಮಾತುಕತೆ ಮುಂದೂಡಿಕೆ, ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ..!

NEET ಭದ್ರತೆಗೆ ಆದ್ಯತೆ; ದೇಶಾದ್ಯಂತ Telegram app ತಾತ್ಕಾಲಿಕ ನಿಷೇಧ, ಕೇಂದ್ರದ ಆದೇಶ ಎತ್ತಿಹಿಡಿದ Delhi ಹೈಕೋರ್ಟ್..!

ಚಿಕ್ಕಮಗಳೂರು: ನಡು ರಸ್ತೆಯಲ್ಲಿ ಲಾಂಗ್​ನಿಂದ ಕೇಕ್‌ ಕತ್ತರಿಸಿ ಬರ್ತಡೇ ಸೆಲೆಬ್ರೇಷನ್‌; ಪುಡಾರಿ ವಿರುದ್ಧ FIR

NEET UG 2026ಗೆ ಮತ್ತೊಂದು ಬಲಿ; ಮರು ಪರೀಕ್ಷೆಗೂ ಮುನ್ನ 17 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ

US-Iran ಒಪ್ಪಂದ ಬೆನ್ನಲ್ಲೇ Hormuzನಲ್ಲಿ ತೈಲ ಸಾಗಣೆ ಪುನರಾರಂಭ: ಲೆಬನಾನ್'ನಲ್ಲಿ ಮುಂದುವರೆದ ಉದ್ವಿಗ್ನತೆ, ಮಧ್ಯಪ್ರಾಚ್ಯ ಶಾಂತಿಗೆ ಕಂಟಕ..!