ನವದೆಹಲಿ: ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್ ಇ)ಯು 10 ಮತ್ತು 12ನೇ ತರಗತಿಯ ಬಾಕಿ ಉಳಿದಿರುವ ಪರೀಕ್ಷೆಗಳ ದಿನಾಂಕವನ್ನು ಸೋಮವಾರ ಪ್ರಕಟಿಸಿಲಿದೆ.
ಇದಕ್ಕು ಮುನ್ನ ಇಂದು ಸಂಜೆ 5 ಗಂಟೆಗೆ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸುವುದಾಗಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೊಖ್ರಿಯಾಲ್ ಅವರು ಸರಣಿ ಟ್ವೀಟ್ ಮಾಡಿದ್ದರು. ಬಳಿಕ ಮೇ 18ಕ್ಕೆ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸುವುದಾಗಿ ಘೋಷಿಸಿದ್ದಾರೆ.
"ಸಿಬಿಎಸ್ಇ 10 ಮತ್ತು 12 ತರಗತಿಗಳ ಪರೀಕ್ಷಾ ದಿನಾಂಕವನ್ನು ಅಂತಿಮಗೊಳಿಸುವ ಮೊದಲು ಕೆಲವು ಹೆಚ್ಚುವರಿ ತಾಂತ್ರಿಕ ಅಂಶಗಳನ್ನು ಪರಿಗಣಿಸುತ್ತಿದೆ. ಈ ಕಾರಣದಿಂದಾಗಿ, 10 ಮತ್ತು 12 ನೇ ತರಗತಿಯ ಪರೀಕ್ಷೆಗಳ ವೇಳಾಪಟ್ಟಿಯನ್ನು ಸೋಮವಾರ ಪ್ರಕಟಿಸಲಾಗುವುದು" ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಜುಲೈ 1ರಿಂದ 15ರೊಳಗೆ 10 ಮತ್ತು 12ನೇ ತರಗತಿಯ 29 ಪ್ರಮುಖ ವಿಷಯಗಳಿಗೆ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಮಂಡಳಿ ಈ ಹಿಂದೆ ತಿಳಿಸಿತ್ತು.