ಪ್ರಮಾಣ ವಚನ ಸ್ವೀಕರಿಸಿದ ಉದ್ಧವ್ ಠಾಕ್ರೆ 
ದೇಶ

ವಿಧಾನಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ 'ಮಹಾ' ಸಿಎಂ ಉದ್ಧವ್ ಠಾಕ್ರೆ

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಸೋಮವಾರ ಮಧ್ಯಾಹ್ನ ವಿಧಾನಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಸೋಮವಾರ ಮಧ್ಯಾಹ್ನ ವಿಧಾನಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ರಾಜಕೀಯ ಪಕ್ಷಗಳ ಎಂಟು ಸದಸ್ಯರು ವಿಧಾನಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ವಿಧಾನಪರಿಷತ್ ಸಭಾಪತಿ ರಾಮರಾಜೆ ನಿಂಬಾಳ್ಕರ್ ನೂತನ ೯ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು. ಮುಖ್ಯಮಂತ್ರಿ ಉದ್ಧವ್ ಠಾಕ್ರೆ  ಅವರೊಂದಿಗೆ ಪತ್ನಿ ರಷ್ಮಿ ಠಾಕ್ರೆ ಮತ್ತು ಇತರ ಉನ್ನತ ಅಧಿಕಾರಿಗಳು ಹಾಜರಿದ್ದರು. ಖಾಲಿ ಉಳಿದಿದ್ದ ವಿಧಾನಪರಿಷತ್ತಿನ ೯ ಸ್ಥಾನಗಳಿಗೆ ನಾಮಪತ್ರಸಲ್ಲಿಸಿದ ನಂತರ ಮೇ ೧೪ ರಂದು ಎಲ್ಲ ಒಂಬತ್ತು ಮಂದಿ ಅವಿರೋಧವಾಗಿ ಚುನಾಯಿತರಾಗಿದ್ದರು. ಉದ್ದವ್ ಠಾಕ್ರೆ ಅವರೊಂದಿಗೆ  ಶಿವಸೇನೆಯ ನೀಲಂ ಗೋರೆ ಬಿಜೆಪಿಯಿಂದ ಗೋಪಿಚಂದ್ ಪಡಲ್ಕರ್, ಪ್ರವೀಣ್ ದಾಟ್ಕೆ, ರಂಜಿತ್ ಸಿಂಹ್ ಮೋಹಿತ್ ಪಾಟೀಲ್, ರಮೇಶ್ ಕರಾದ್, ಕಾಂಗ್ರೆಸ್ ನ ರಾಜೇಶ್ ರಾಥೋಡ್, ಎನ್ ಸಿಪಿ ಸೇರಿದ ಶಶಿಕಾಂತ್ ಶಿಂಧೆ ಆಮೂಲ್ ಮಿಟ್ಕಾರಿ ಪ್ರಮಾಣ ಸ್ವೀಕರಿಸಿದವರಲ್ಲಿ ಸೇರಿದ್ದಾರೆ. 

ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಉದ್ದವ್ ಠಾಕ್ರೆ ೨೦೧೯ ನವಂಬರ್ ೨೮ರಂದು ಪ್ರಮಾಣ ವಚನ ಸ್ವೀಕರಿಸಿದ್ದರು. ಆದರೆ, ಆಗ ಅವರು ಯಾವುದೇ ಶಾಸನ ಸಭೆ (ವಿಧಾನಸಭೆ,ವಿಧಾನಪರಿಷತ್) ಸದಸ್ಯರಾಗಿರಲಿಲ್ಲ. ಇದರಿಂದ ಸಂವಿಧಾನದ ಕಲಂ ೧೬೪ ಪ್ರಕಾರ  ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಆರು ತಿಂಗಳೊಳಗಾಗಿ ಉಭಯ ಸದನಗಳ ಪೈಕಿ ಯಾವುದಾದರೂ ಒಂದು ಸಭೆಗೆ ಆಯ್ಕೆಯಾಗುವುದು ಅನಿವಾರ್ಯವಾಗಿತ್ತು. ಕೊರೋನಾ ಕಾರಣದಿಂದ ಚುನಾವಣೆಗಳನ್ನು ರದ್ದುಗೊಳಿಸಲಾಯಿತು. ಆದರೆ, ಕೇಂದ್ರ ಚುನಾವಣಾ ಆಯೋಗದ  ಮಧ್ಯಪ್ರವೇಶದಿಂದ ಚುನಾವಣೆ ನಡೆಸಲು ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಹಸಿರು ನಿಶಾನೆ ತೋರಿಸಿದ್ದರು. ಕಾರಣ ಉದ್ದವ್ ಠಾಕ್ರೆ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

ಒಂದು ವೇಳೆ ವಿಧಾನಪರಿಷತ್ ಸದಸ್ಯರಾಗಿ ನಾಮಕರಣಗೊಳ್ಳದಿದ್ದರೆ, ಮೇ ೨೮ರೊಳಗೆ ಠಾಕ್ರೆ ಅವರು ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ನೀಡಬೇಕಾಗುತ್ತಿತ್ತು. ಈಗ ಅವಿರೋಧವಾಗಿ ಆಯ್ಕೆಯಾಗಿರುವ ಕಾರಣ ಉದ್ದವ್ ಠಾಕ್ರೆ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ.

ಮಹಾರಾಷ್ಟ್ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಉದ್ದವ್ ಠಾಕ್ರೆ ನೇತೃತ್ವದ ಶಿವಸೇನಾ. ಬಿಜೆಪಿ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿದ್ದವಾದರೂ, ನಂತರ ನಡೆದ ಪರಿಣಾಮಗಳ ಹಿನ್ನಲೆಯಲ್ಲಿ ಬಿಜೆಪಿಯ ಮೈತ್ರಿಯನ್ನು ಶಿವಸೇನಾ ಕಳೆದುಕೊಂಡಿತ್ತು. ಶಿವಸೇನೆ- ಕಾಂಗ್ರೆಸ್ -  ಎನ್ ಸಿಪಿ ಮೈತ್ರಿ ಕೂಟದ ನಾಯಕರಾಗಿ ಹೊರಹೊಮ್ಮಿದ್ದ ಉದ್ದವ್ ಠಾಕ್ರೆ ಮುಖ್ಯಮಂತ್ರಿಯಾಗಿ ನವಂಬರ್ ೨೮ರಂದು ಪ್ರಮಾಣ ವಚನ ಸ್ವೀಕರಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT