ದೇಶ

ಲಾಕ್‌ಡೌನ್ 4.0 ಮಾರ್ಗಸೂಚಿಗಳನ್ಮು ಕಡ್ಡಾಯವಾಗಿ ಪಾಲಿಸಬೇಕು: ರಾಜ್ಯಗಳಿಗೆ ಕೇಂದ್ರದ ಕಟ್ಟು ನಿಟ್ಟಿನ ಆದೇಶ 

Lingaraj Badiger

ನವದೆಹಲಿ: ಯಾವುದೇ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶಗಳು ಲಾಕ್‌ಡೌನ್ 4.0 ಮಾರ್ಗಸೂಚಿಗಳನ್ಮು ಯಾವುದೇ ಕಾರಣಕ್ಕೂ ಉಲ್ಲಂಘಿಸಬಾರದು. ಮೇ 31ರ ವರೆಗೆ ದೇಶಾದ್ಯಂತ ಲಾಕ್‌ಡೌನ್ 4.0 ಮಾರ್ಗಸೂಚಿಗಳು ಅನ್ವಯವಾಗಲಿವೆ ಎಂದು ಕೇಂದ್ರ ಗೃಹ ಸಚಿವಾಲಯ ಸೋಮವಾರ ಹೇಳಿದೆ.

ಈ ಸಂಬಂಧ ರಾಜ್ಯ ಸರ್ಕಾರಗಳ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರು, ಮೇ 11 ರಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ನಡೆಸಿದ ವಿಡಿಯೋ ಕಾನ್ಫೆರೆನ್ಸ್ ಸಭೆಯಲ್ಲಿ ರಾಜ್ಯಗಳಿಂದ ಪಡೆದ ಅಭಿಪ್ರಾಯ ಆಧರಿಸಿ ಈ ಮಾರ್ಗಸೂಚಿಗಳನ್ನು ಸಿದ್ಧಪಡಿಸಲಾಗಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಈ ಮಾರ್ಗಸೂಚಿಗಳನ್ನು ಉಲ್ಲಂಘಿಸಬಾರದು ಎಂದು ಸೂಚಿಸಲಾಗಿದೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು, ತಮ್ಮ ರಾಜ್ಯಗಳ ಪರಿಸ್ಥಿತಿಯ ಆಧಾರದ ಮೇಲೆ, ವಿವಿಧ ವಲಯಗಳಲ್ಲಿ ಕೆಲವು ಚಟುವಟಿಕೆಗಳನ್ನು ನಿಷೇಧಿಸಬಹುದು ಅಥವಾ ಅಗತ್ಯವೆಂದು ಪರಿಗಣಿಸುವಂತಹ ನಿರ್ಬಂಧಗಳನ್ನು ವಿಧಿಸಬಹುದು ಎಂದು ಭಲ್ಲಾ ಹೇಳಿದ್ದಾರೆ.

"ಹೊಸ ಮಾರ್ಗಸೂಚಿಗಳ ಪಾಲನೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಸಂಬಂಧಪಟ್ಟ ಎಲ್ಲ ಅಧಿಕಾರಿಗಳು ಈ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ನಿರ್ದೇಶಿಸಬೇಕು ಎಂದು ನಾನು ನಿಮ್ಮನ್ನು ಒತ್ತಾಯಿಸುತ್ತೇನೆ" ಎಂದು ಭಲ್ಲಾ ಮುಖ್ಯ ಕಾರ್ಯದರ್ಶಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

SCROLL FOR NEXT