ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್-19: ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 4,970 ಹೊಸ ಪ್ರಕರಣ, 1 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ

ಕಳೆದ 24 ಗಂಟೆಗಳಲ್ಲಿ 4 ಸಾವಿರದ 970 ಹೊಸ ಕೋವಿಡ್ ಪ್ರಕರಣಗಳು ದಾಖಲಾಗುವುದರೊಂದಿಗೆ ದೇಶಾದ್ಯಂತ ಮಾರಕ ಕೊರೋನಾವೈರಸ್ ಸೋಂಕಿಗೆ ತುತ್ತಾದವರ ಸಂಖ್ಯೆ 1 ಲಕ್ಷ ಗಡಿಯನ್ನು ದಾಟಿದೆ. 

ನವದೆಹಲಿ:ದೇಶದಲ್ಲಿ ಮಾರಕ ಕೊರೋನಾವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೆ ಇದೆ. ಕಳೆದ 24 ಗಂಟೆಗಳಲ್ಲಿ 4 ಸಾವಿರದ 970 ಹೊಸ ಕೋವಿಡ್ ಪ್ರಕರಣಗಳು ದಾಖಲಾಗುವುದರೊಂದಿಗೆ ದೇಶಾದ್ಯಂತ ಮಾರಕ ಕೊರೋನಾವೈರಸ್ ಸೋಂಕಿಗೆ ತುತ್ತಾದವರ ಸಂಖ್ಯೆ 1 ಲಕ್ಷ ಗಡಿಯನ್ನು ದಾಟಿದೆ.

ಮಹಾರಾಷ್ಟ್ರ, ಗುಜರಾತ್, ತಮಿಳುನಾಡು ಮತ್ತಿತರ ರಾಜ್ಯಗಳಲ್ಲಿ ಹೆಚ್ಚಿನ ಸಂಖ್ಯೆಯ ಜನರು ಮಾರಕ ಕೊರೋನಾವೈರಸ್ ಸೋಂಕಿಗೆ ತುತ್ತಾಗಿದ್ದಾರೆ. 

ಮೇ.31ರವರೆಗೂ ಕೊರೋನಾವೈರಸ್ ಲಾಕ್ ಡೌನ್ ನ್ನು ಕೇಂದ್ರ ಸರ್ಕಾರ ಭಾನುವಾರ ವಿಸ್ತರಿಸಿದೆ. ಆದರೆ, ಅನೇಕ ವಿನಾಯಿತಿಗಳೊಂದಿಗೆ ಭರವಸೆ ನೀಡಿದಂತಿದೆ. 

ಹೊಸ ಮಾರ್ಗೂಸೂಚಿಯಂತೆ ಸಲೂನ್, ಕ್ಷೌರದಂಗಡಿ, ಶಾಫಿಂಗ್ ಕಾಪ್ಲೆಂಕ್ಸ್ ಮತ್ತು ಮಾರ್ಕೆಟ್ ಗಳನ್ನು ತೆರೆಯಲು ನಿನ್ನೆಯಿಂದ ಅವಕಾಶ ನೀಡಲಾಗಿದೆ. ಆದಾಗ್ಯೂ, ದೇಶಿಯ ವಿಮಾನಗಳು, ಶಾಲಾ- ಕಾಲೇಜುಗಳು, ಹೋಟೆಲ್ ಗಳು ದೇಶಾದ್ಯಂತ ಮುಚ್ಚಲ್ಪಟ್ಟಿರುತ್ತವೆ.

ಕಂಟೈನ್ ಮೆಂಟ್ ವಲಯಗಳನ್ನು ಹೊರತುಪಡಿಸಿ ಸರ್ಕಾರದಿಂದ ವಲಯವಾರು ನಿರ್ಬಂಧವಿಲ್ಲ ಮತ್ತು ಆರೋಗ್ಯ ಸಚಿವಾಲಯದ ಅಂಕಿಸಂಖ್ಯೆಗಳೊಂದಿಗೆ  ಕೆಂಪು, ಹಳದಿ ಮತ್ತು ಹಸಿರು ವಲಯವನ್ನಾಗಿ ರೂಪಿಸುವ ಅಧಿಕಾರವನ್ನು ಆಯಾ ರಾಜ್ಯಗಳಿಗೆ ನೀಡಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ