ರಸ್ತೆ ಕೆಳಗೆ ಮಗುಚಿಬಿದ್ದ ಟ್ರಕ್ 
ದೇಶ

ಬಿಹಾರ: ಟ್ರಕ್ ಬಸ್ಸಿಗೆ ಢಿಕ್ಕಿಯಾಗಿ 9 ವಲಸೆ ಕಾರ್ಮಿಕರು ಸಾವು

ಬಿಹಾರದ ಭಗಲ್ಪುರ ಜಿಲ್ಲೆಯಲ್ಲಿ ಮಂಗಳವಾರ ನಸುಕಿನ ಜಾವ ಟ್ರಕ್ ಬಸ್ಸಿಗೆ ಢಿಕ್ಕಿ ಹೊಡೆದು 9 ಮಂದಿ ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ.

ಪಾಟ್ನಾ: ಬಿಹಾರದ ಭಗಲ್ಪುರ ಜಿಲ್ಲೆಯಲ್ಲಿ ಮಂಗಳವಾರ ನಸುಕಿನ ಜಾವ ಟ್ರಕ್ ಬಸ್ಸಿಗೆ ಢಿಕ್ಕಿ ಹೊಡೆದು 9 ಮಂದಿ ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ.

ಖಗರಿಯಾ ಕಡೆ ಹೊರಟಿದ್ದ ಹತ್ತಾರು ವಲಸೆ ಕಾರ್ಮಿಕರನ್ನು ಹೊತ್ತು ಸಾಗುತ್ತಿದ್ದ ಟ್ರಕ್ ನೌಗಾಛಿಯಾ ಹತ್ತಿರ ರಾಷ್ಟ್ರೀಯ ಹೆದ್ದಾರಿ 31ರಲ್ಲಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬಸ್ ಗೆ ಢಿಕ್ಕಿ ಹೊಡೆದು ಕೆಳಗೆ ಬಿದ್ದು 9 ವಲಸೆ ಕಾರ್ಮಿಕರು ಸ್ಥಳದಲ್ಲಿಯೇ ಮೃತಪಟ್ಟರು.

ಘಟನೆ ಬಗ್ಗೆ ವಿವರ ನೀಡಿದ ಉಪ ಪೊಲೀಸ್ ಮಹಾ ನಿರ್ದೇಶಕ ಸುಜೀತ್ ಕುಮಾರ್, ಸ್ಥಳೀಯ ಪೊಲೀಸರು ಮೃತಪಟ್ಟವರ ಗುರುತು ಪತ್ತೆಹಚ್ಚುತ್ತಿದ್ದಾರೆ. ಇದುವರೆಗೆ 9 ಶವಗಳನ್ನು ಹೊರತೆಗೆಯಲಾಗಿದೆ. ಪ್ರಾಥಮಿಕ ತನಿಖೆ ಪ್ರಕಾರ, ಕಾಟಿಹಾರ್ ಸಮೀಪ ಕಬ್ಬಿಣದ ಸಲಾಕೆ ಹೊತ್ತೊಯ್ಯುತ್ತಿದ್ದ ಟ್ರಕ್ ನಲ್ಲಿ ವಲಸೆ ಕಾರ್ಮಿಕರನ್ನು ಕರೆದೊಯ್ಯಲಾಗಿತ್ತು. ಇನ್ನು ಬೈಕ್ ನಲ್ಲಿ ಸಂಚರಿಸುತ್ತಿದ್ದ ವಲಸೆ ಕಾರ್ಮಿಕರ ಬೈಕ್ ಗಳನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಟ್ರಕ್ ನ ಚಾಲಕ ಮತ್ತು ಕ್ಲೀನರ್ ಅಪಘಾತ ಸ್ಥಳದಿಂದ ಪರಾರಿಯಾಗಿದ್ದಾರೆ. ಬಸ್ಸಿನಲ್ಲಿದ್ದ ಕೆಲವು ಪ್ರಯಾಣಿಕರಿಗೆ ಗಾಯಗಳಾಗಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!