ರಾಹುಲ್ ಗಾಂಧಿ, ಸೋನಿಯಾ ಗಾಂಧಿ 
ದೇಶ

ವಲಸೆ ಕಾರ್ಮಿಕರ ಕುರಿತು ಚರ್ಚಿಸಲು ಮೇ 22 ರಂದು ವಿರೋಧ ಪಕ್ಷಗಳ ಸಭೆ ಕರೆದ ಸೋನಿಯಾ ಗಾಂಧಿ

ಕೊರೋನಾ ವೈರಸ್‌ ಹಾಗೂ ವಲಸೆ ಕಾರ್ಮಿಕರ ಕುರಿತು ಚರ್ಚಿಸುವುದಕ್ಕಾಗಿ ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮೇ 22 ರಂದು ವಿರೋಧ ಪಕ್ಷಗಳ ಸಭೆ ಕರೆದಿದ್ದಾರೆ ಮೂಲಗಳು ತಿಳಿಸಿವೆ.

ನವದೆಹಲಿ: ಕೊರೋನಾ ವೈರಸ್‌ ಹಾಗೂ ವಲಸೆ ಕಾರ್ಮಿಕರ ಕುರಿತು ಚರ್ಚಿಸುವುದಕ್ಕಾಗಿ ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮೇ 22 ರಂದು ವಿರೋಧ ಪಕ್ಷಗಳ ಸಭೆ ಕರೆದಿದ್ದಾರೆ ಮೂಲಗಳು ತಿಳಿಸಿವೆ.

ಮೇ 22 ರಂದು ಮಧ್ಯಾಹ್ನ 3 ಗಂಟೆಗೆ ಸೋನಿಯಾ ಗಾಂಧಿ ಅವರು ವಿಡಿಯೋ ಕಾನ್ಫೆರೆನ್ಸ್ ಮೂಲಕ ಸಮಾನ ಮನಸ್ಕ ಪ್ರತಿಪಕ್ಷಗಳ ಸಭೆ ನಡೆಸಲಿದ್ದಾರೆಂದು ತಿಳಿದುಬಂದಿದೆ.

ದೇಶಾದ್ಯಂತ ಮಾರಕವಾಗಿ ಕಾಡುತ್ತಿರುವ ಕೊರೋನಾ ವೈರಸ್‌ ಕುರಿತಾಗಿ ಹಾಗೂ ಲಾಕ್‌ಡೌನ್‌ ಅವಧಿಯಲ್ಲಿ ವಲಸೆ ಕಾರ್ಮಿಕರು ತಮ್ಮ-ತಮ್ಮ ಮನೆಗಳಿಗೆ ತೆರಳುವಲ್ಲಿ ಎದುರಿಸುತ್ತಿರಿವ ಕಷ್ಟಗಳು ಕುರಿತು ಮತ್ತು ಕಾರ್ಮಿಕ ಕಾನೂನು ತಿದ್ದುಪಡಿ ಕುರಿತು ಈ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ಮೂಲಗಳು ಹೇಳಿವೆ.

ಸಭೆಯಲ್ಲಿ ಭಾಗವಹಿಸಲು ಸುಮಾರು 17 ಪಕ್ಷಗಳ ನಾಯಕರು ಒಪ್ಪಿಕೊಂಡಿದ್ದಾರೆ. ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷ ಸಭೆಯಲ್ಲಿ ಭಾಗವಹಿಸುವ ಬಗ್ಗೆ ಇನ್ನು ನಿರ್ಧರಿಸಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

'ಮೊದಲು ನಿಮ್ಮ ಅಮೆರಿಕದಲ್ಲಿ ಕೈಗೆಟುಕುವ ದರದಲ್ಲಿ ಸೇವೆ ಒದಗಿಸಿ': ಒತ್ತಡಕ್ಕೆ ಭಾರತ ಮಣಿಯಲ್ಲ; ಎಲಾನ್ ಮಸ್ಕ್ ವಿರುದ್ಧ ನಿಶಿಕಾಂತ್ ದುಬೆ

'ನನ್ನನ್ನಲ್ಲ, ನಿಮ್ ಗಂಡನ ಗುರಾಯಿಸಿ', ಜಯಾ ಬಚ್ಚನ್‌ ಖಡಕ್ ನೋಟಕ್ಕೆ ಫೋಟೋಗ್ರಾಫರ್ ತಿರುಗೇಟು! Video

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ