ದೇಶ

ಸಂಪುಟ ನಿರ್ಧಾರಗಳು ಸ್ವಾವಲಂಬಿ ಭಾರತ ನಿರ್ಮಾಣದ ಪ್ರಯತ್ನಕ್ಕೆ ಪೂರಕವಾಗಲಿದೆ: ಪ್ರಧಾನಿ ಮೋದಿ

Sumana Upadhyaya

ನವದೆಹಲಿ: ವಲಸೆ ಕಾರ್ಮಿಕರು, ಹಿರಿಯ ನಾಗರಿಕರ ಅಭಿವೃದ್ಧಿ, ಕ್ರೆಡಿಟ್ ಗಳು ಸುಲಭವಾಗಿ ನಾಗರಿಕರಿಗೆ ದೊರಕುವಂತೆ ಮಾಡುವುದು, ಮೀನುಗಾರಿಕೆ ವಲಯದಲ್ಲಿ ಹೆಚ್ಚಿನ ಅವಕಾಶಗಳನ್ನು ಹೊರತೆಗೆಯುವುದು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಗಳು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಇಂದಿನ ಸಂಪುಟ ಸಭೆಯಲ್ಲಿ ಹಲವು ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದ್ದು ಇದು ಹಲವು ನಾಗರಿಕರಿಗೆ ಅನುಕೂಲವಾಗಲಿದೆ ಎಂದು ಪ್ರಧಾನಿ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯನ್ನು ಉಲ್ಲೇಖಿಸಿ ಮಾತನಾಡಿದ ಅವರು, ಇದು ಮೀನುಗಾರಿಕೆ ವಲಯದಲ್ಲಿ ಕ್ರಾಂತಿಯನ್ನುಂಟುಮಾಡಲಿದೆ. ಇತ್ತೀಚಿನ ತಂತ್ರಜ್ಞಾನ, ಮೂಲಸೌಕರ್ಯಗಳನ್ನು ಉತ್ತೇಜಿಸುವುದು ಮಾತ್ರವಲ್ಲದೆ ಹಣಕಾಸಿನ ನೆರವು ನೀಡುತ್ತದೆ.ನಮ್ಮ ಶ್ರಮಶೀಲ ಮೀನುಗಾರರು ಅಪಾರ ಲಾಭ ಪಡೆಯುತ್ತಾರೆ ಎಂದು ಮೋದಿ ಹೇಳಿದ್ದಾರೆ.

ಸಚಿವ ಸಂಪುಟ ತೆಗೆದುಕೊಂಡ ಮತ್ತೊಂದು ನಿರ್ಧಾರ ಆಹಾರ ಸಂಸ್ಕರಣಾ ಕ್ಷೇತ್ರಕ್ಕೆ ಕೊಡುಗೆ ನೀಡುತ್ತದೆ. ಆತ್ಮ ನಿರ್ಭಾರ್ ಭಾರತ್ ಕಡೆಗೆ ಭಾರತದ ಪ್ರಯತ್ನಗಳನ್ನು ಬಲಪಡಿಸುತ್ತದೆ ಎಂದರು.

ಸೂಕ್ಷ್ಮ ಆಹಾರ ಸಂಸ್ಕರಣಾ ಉದ್ಯಮಗಳನ್ನು ಔಪಚಾರಗೊಳಿಸುವ ಯೋಜನೆ ಕುರಿತು ಕೇಂದ್ರ ಸಚಿವ ಸಂಪುಟದ ನಿರ್ಧಾರವು ಸ್ವ-ಸಹಾಯ ಗುಂಪುಗಳು, ಸಹಕಾರಿ ಸಂಸ್ಥೆಗಳು ಮತ್ತು ಸೂಕ್ಷ್ಮ ಆಹಾರ ವ್ಯವಹಾರಗಳಿಗೆ ದೊಡ್ಡ ಉತ್ತೇಜನವನ್ನು ನೀಡುತ್ತದೆ ಮತ್ತು ಗ್ರಾಮೀಣ-ನಗರ ಸಮುದಾಯಗಳಿಗೆ ಸಾಕಷ್ಟು ಜೀವನೋಪಾಯವನ್ನು ನೀಡಲಿದೆ ಎಂದು ಪ್ರಧಾನಿ ಹೇಳಲಿದ್ದಾರೆ.

SCROLL FOR NEXT