ದೇಶ

ಕೋವಿಡ್ -19 ಸಾಂಕ್ರಾಮಿಕ ನಿಯಂತ್ರಿಸಲು ಮಾರ್ಗಸೂಚಿ ಕಟ್ಟುನಿಟ್ಟಾಗಿ ಜಾರಿಗೊಳಿಸಿ; ರಾಜ್ಯಗಳಿಗೆ ಕೇಂದ್ರ ಸೂಚನೆ

Srinivas Rao BV

ನವದೆಹಲಿ: ದೇಶದಲ್ಲಿ ಕೋವಿಡ್-19 ಸೋಂಕು ರೋಗ ನಿಯಂತ್ರಿಸಲು ಎಲ್ಲ ಮಾರ್ಗಸೂಚಿಗಳನ್ನು ಅತ್ಯಂತ ಕಟ್ಟು ನಿಟ್ಟಾಗಿ ಪಾಲಿಸಬೇಕು ಎಂದು ಕೇಂದ್ರ ಸರ್ಕಾರ, ರಾಜ್ಯಗಳಿಗೆ ಗುರುವಾರ ಮತ್ತೆ ಸೂಚಿಸಿದೆ. ಲಾಕ್ ಡೌನ್ ಗೆ ಸಂಬಂಧಿಸಿದ ಗೃಹ ಸಚಿವಾಲಯದ ಮಾರ್ಗಸೂಚಿ ಜಾರಿಗೊಳಿಸಲು ಸ್ಥಳೀಯ ಆಡಳಿತಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದೆ.

ಕೇಂದ್ರೀಯ ಮಾರ್ಗಸೂಚಿಗಳ ಉಲ್ಲಂಘನೆ ಸಂಬಂಧ ಮಾಧ್ಯಮಗಳ ವರದಿ ಹಾಗೂ ಇತರ ಮೂಲಗಳನ್ನು ಉಲ್ಲೇಖಿಸಿ ರಾಜ್ಯ ಸರ್ಕಾರಗಳ ಮುಖ್ಯಕಾರ್ಯದರ್ಶಿಗಳಿಗೆ ಈ ಸಂಬಂಧ ಪತ್ರ ಬರೆದಿರುವ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್  ಭಲ್ಲಾ,  ಕೋವಿಡ್-19 ನಿಯಂತ್ರಿಸುವ ಕ್ರಮಗಳ ಜಾರಿ ಖಾತರಿ ಪಡಿಸಲು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ. ಕಂಟೈನ್ ಮೆಂಟ್ ಪ್ರದೇಶಗಳನ್ನು ಸೂಕ್ತವಾಗಿ ಗುರುತಿಸಿ, ಈ ವಲಯಗಳಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿ ಹಾಗೂ ನಿರ್ಬಂಧ ಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಬೇಕು. ರಾತ್ರಿ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ರಾತ್ರಿ ಕರ್ಪ್ಯೂ ಅಥವಾ ಎಲ್ಲ ಅಗತ್ಯೇತರ ಚಟುವಟಿಕೆಗಳ  ನಿಷೇಧಿಸಿಬೇಕುಎಂದು ಪತ್ರದಲ್ಲಿ ಒತ್ತಿ ಹೇಳಿದೆ. ಕೇಂದ್ರ ಗೃಹ ಸಚಿವಾಲಯದ ಮಾರ್ಗಸೂಚಿಯಲ್ಲಿ ಇದು ಅತ್ಯಂತ ಮಹತ್ವದ ಸೂಚನೆಯಾಗಿದೆ. 

SCROLL FOR NEXT