ಸೋನಿಯಾ ಗಾಂಧಿ 
ದೇಶ

ಪಿಎಂ ಕೇರ್ಸ್ ನಿಧಿ ವಿರುದ್ಧ ಅವಹೇಳಕಾರಿ ಹೇಳಿಕೆ: ಸೋನಿಯಾ ಗಾಂಧಿ ವಿರುದ್ಧ ಎಫ್ಐಆರ್ ದಾಖಲು

ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ವಿರುದ್ಧ ಗುರುವಾರ ಸಾಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಎಎಫ್ಐಆರ್ ದಾಖಲಾಗಿದೆ. 

ಶಿವಮೊಗ್ಗ: ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ವಿರುದ್ಧ ಗುರುವಾರ ಸಾಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಎಎಫ್ಐಆರ್ ದಾಖಲಾಗಿದೆ. 

ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮೋದಿಯವರು ಪಿಎಂ ಕೇರ್ ಫಂಡ್ ದುರ್ಬಳಕೆ ಮಾಡಿಕೊಂಡಿದ್ದಾರೆಂದು ಬರೆಯಲಾಗಿದೆ. ಅಲ್ಲದೆ, ಪಿಎಂ ಕೇರ್ ಫಂಡ್ ಫ್ರಾಡ್ ಎಂದು ಟ್ವಿಟರ್ ನಲ್ಲಿ ಟೀಕಿಸಲಾಗಿದೆ. 

ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರನ್ನು ಅವಹೇಳನ ಮಾಡಲಾಗಿದೆ ಎಂದು ಆರೋಪಿಸಿ ಸಾಗರದ ವಕೀಲ ಪ್ರವೀಣ್ ಎಂಬುವವರು ಸೋನಿಯಾ ಗಾಂಧಿಯವರ ವಿರುದ್ಧ ದೂರು ನೀಡಿದ್ದಾರೆಂದು ತಿಳಿದುಬಂದಿದೆ. 

ಇಂತಹ ಹೇಳಿಕೆಗಳ ಮೂಲಕ ಮೋದಿಯವರ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದ್ದು, ಜನರನ್ನು ಪ್ರಚೋದಿಸಲಾಗುತ್ತಿದೆ ಎಂದು ವಕೀಲ ಆರೋಪಿಸಿದ್ದಾರೆ. ದೂರು ಹಿನ್ನೆಲೆಯಲ್ಲಿ ಪೊಲೀಸರು ಐಪಿಸಿ ಸೆಕ್ಷನ್ 153 ಮತ್ತು 505(1) (ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಲೂಚಿಸ್ತಾನದಲ್ಲಿ ಉಗ್ರರ ವಿರುದ್ಧ ಭಾರಿ ಕಾರ್ಯಾಚರಣೆ: 145 ಭಯೋತ್ಪಾದಕರ ಹತ್ಯೆಗೈದಿದ್ದೇವೆಂದ ಪಾಕಿಸ್ತಾನ, ಭಾರತ-ಆಫ್ಘನ್ ವಿರುದ್ಧ ಗಂಭೀರ ಆರೋಪ

ಅಂಡಮಾನ್-ನಿಕೋಬಾರ್ ದ್ವೀಪ, ಕಾಶ್ಮೀರದಲ್ಲಿ ಅವಳಿ ಭೂಕಂಪನ: ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲು

ಬೆಂಗಳೂರು: ಬನ್ನೇರುಘಟ್ಟದಲ್ಲಿ ಸಿನಿಮಾ ಶೈಲಿಯಲ್ಲಿ ದರೋಡೆ; ಯುವಕನಿಗೆ ಲಾಂಗ್ ತೋರಿಸಿ ಬೆದರಿಕೆ, 31 ಲಕ್ಷ ರೂ. ಲೂಟಿ..! Video

ಹೋಳಿ ನಂತರ ನಿತೀಶ್ ಕುಮಾರ್ ಪುತ್ರ ನಿಶಾಂತ್ ರಾಜಕೀಯ ಪ್ರವೇಶ? ಬಂಗಾಳ ಚುನಾವಣೆಗೆ ಬಿಜೆಪಿ ಸಿದ್ಧತೆ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ. ರಾಯ್ ಸಾವು ಪ್ರಕರಣ: SIT ತನಿಖೆ ಆರಂಭ

SCROLL FOR NEXT