ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಭಾರತದಲ್ಲಿ ಕೊರೋನಾ ರಣಕೇಕೆ: ಒಂದೇ ದಿನ 5,609 ಮಂದಿಯಲ್ಲಿ ಸೋಂಕು ಪತ್ತೆ, 132 ಮಂದಿ ಸಾವು

ದೇಶದಲ್ಲಿ ಕೊರೋನಾ ಹಾವಳಿ ಮತ್ತಷ್ಟು ಹೆಚ್ಚಳವಾಗಿದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 5,609 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಅಲ್ಲದೆ, ಮಹಾಮಾರಿ ವೈರಸ್'ಗೆ 132 ಮಂದಿ ಬಲಿಯಾಗಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಸಂಗ್ರಹ ಚಿತ್ರ
Manjula VN
Updated On : 21 May 2020, 12:33 pm

ನವದೆಹಲಿ: ದೇಶದಲ್ಲಿ ಕೊರೋನಾ ಹಾವಳಿ ಮತ್ತಷ್ಟು ಹೆಚ್ಚಳವಾಗಿದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 5,609 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಅಲ್ಲದೆ, ಮಹಾಮಾರಿ ವೈರಸ್'ಗೆ 132 ಮಂದಿ ಬಲಿಯಾಗಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಈ ಮೂಲಕ ದೇಶದಲ್ಲಿ ಬಲಿಯಾದವರ ಸಂಖ್ಯೆ 3435ಕ್ಕೆ ಏರಿಕೆಯಾಗಿದ್ದು, ಸೋಂಕಿತರ ಸಂಖ್ಯೆ 1,12,359ಕ್ಕೆ ತಲುಪಿದೆ. 

ಇದೇ ವೇಳೆ 1,12,359 ಮಂದಿ ಸೋಂಕಿತರ ಪೈಕಿ 48,735 ಮಂದಿ ಸೋಂಕಿನಿಂದ ಗುಣಮುಖರಾಗಿ, ಆಸ್ಪತ್ರೆಯಗಳಿಂದ ಬಿಡುಗಡೆಗೊಂಡಿದ್ದು, ಇನ್ನೂ ದೇಶದಲ್ಲಿ 63624 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. 

Advertisement

Advertisement

ಇನ್ನು ದೇಶದಲ್ಲಿ ಅತೀ ಹೆಚ್ಚು ಸೋಂಕು ಕಂಡು ಬಂದಿರುವ ಮಹಾರಾಷ್ಟ್ರದಲ್ಲಿ ಸತತ 4ನೇ ದಿನವೂ 2000ಕ್ಕಿಂತ ಹೆಚ್ಚಿನ ಕೇಸು ಬೆಳಕಿಗೆ ಬಂದಿದೆ. ಬುಧವಾರ ರಾಜ್ಯದಲ್ಲಿ 2250 ಹೊಸ ಪ್ರಕರಣದೊಂದಿಗೆ ಒಟ್ಟಾರೆ ಸೋಂಕಿತರ ಸಂಖ್ಯೆ 39297ಕ್ಕೆ ತಲುಪಿದೆ. ಜೊತೆಗೆ 65 ಜನ ಒಂದೇ ದಿನ ಸಾವನ್ನಪ್ಪಿದ್ದು, ಒಟ್ಟಾರೆ ಸಾವಿನಸಂಖ್ಯೆ 1390ಕ್ಕೆ ಮುಂಟ್ಟಿದೆ. ಉಳಿದಂತೆ ತಮಿಳುನಾಡಿನಲ್ಲಿ 743 ಕೇಸು, 3 ಸಾವು, ದೆಹಲಿಯಲ್ಲಿ 534 ಕೇಸು, 10 ಸಾವು, ಗುಜರಾತ್ ರಾಜ್ಯದಲ್ಲಿ 398 ಕೇಸು, 30 ಸಾವು, ಮಧ್ಯಪ್ರದೇಶದಲ್ಲಿ 270 ಸೋಂಕು, 9 ಮಂದಿ ಸಾವು ದಾಖಲಾಗಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement