ದೇಶ

ಅಂಫಾನ್ ಚಂಡಮಾರುತ: ಪಶ್ಚಿಮ ಬಂಗಾಳದಲ್ಲಿ ಮೋದಿ ವೈಮಾನಿಕ ಸಮೀಕ್ಷೆ, ಪ್ರಧಾನಿಗೆ ಮಮತಾ ಬ್ಯಾನರ್ಜಿ ಸಾಥ್

Manjula VN

ನವದೆಹಲಿ: ಅಂಫಾನ್ ಚಂಡಮಾರುತಕ್ಕೆ ಕಂಗಾಲಾಗಿರುವ ಪಶ್ಚಿಮ ಬಂಗಾಳಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭೇಟಿ ನೀಡಿದ್ದು, ಪರಿಸ್ಥಿತಿ ಅವಲೋಕನ ನಡೆಸುತ್ತಿದ್ದಾರೆಂದು ವರದಿಗಳಿಂದ ಶುಕ್ರವಾರ ತಿಳಿದುಬಂದಿದೆ. 

ನಿನ್ನೆಯಷ್ಟೇ ವೈಮಾನಿಕ ಸಮೀಕ್ಷೆ ನಡೆಸಲು ಪಶ್ಚಿಮಬಂಗಾಳಕ್ಕೆ ತೆರಳುತ್ತೇನೆಂದು ತಿಳಿಸಿದ್ದ ಪ್ರಧಾನಿ ಮೋದಿಯವರು ಇಂದು ಬೆಳಿಗ್ಗೆ ನವದೆಹಲಿಯಿಂದ ಪಶ್ಚಿಮ ಬಂಗಾಳಕ್ಕೆ ತೆರಳಿದ್ದಾರೆ. ಇದರಂತೆ ರಾಜ್ಯಕ್ಕೆ ಆಗಮಿಸಿದ ಪ್ರಧಾನಮಂತ್ರಿಗಳನ್ನು ಸ್ವತಃ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರೇ ಸ್ವಾಗತಿಸಿದರು. 

ಇದೀಗ ಮೋದಿಯವರು ವೈಮಾನಿಕ ಸಮೀಕ್ಷೆ ನಡೆಸುತ್ತಿದ್ದು, ಪ್ರಧಾನಮಂತ್ರಿಗಳಿಗೆ ಸಿಎಂ ಮಮತಾ ಬ್ಯಾನರ್ಜಿ ಕೂಡ ಸಾಥ್ ನೀಡಿದ್ದಾರೆ.

ಮಮತಾ ಬ್ಯಾನರ್ಜಿಯವರೊಂದಿಗೆ ಮಾತುಕತೆ ನಡೆಸಿದ ಬಳಿಕ, ಪ್ರಧಾನಿ ಮೋದಿಯವರು ವೈಮಾನಿಕ ಸಮೀಕ್ಷೆ ನಡೆಸಲಿದ್ದು, ಅಧಿಕಾರಿಗಳಿಂದ ಪರಿಸ್ಥಿತಿ ಕುರಿತು ಮಾಹಿತಿ ಪಡೆಯಲಿದ್ದಾರೆ. ಪರಿಸ್ಥಿತಿ ಅವಲೋಕನ ನಡೆಸಿದ ಬಳಿಕ ಸಭೆ ನಡೆಸಲಿರುವ ಮೋದಿಯವರು ನಿರಾಶ್ರಿತ ಕೇಂದ್ರ ಹಾಗೂ ಪರಿಹಾರ ಕುರಿತು ಘೋಷಣೆ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 

SCROLL FOR NEXT