ಆಂಧ್ರ, ಪಶ್ಚಿಮ ಬಂಗಾಳ ಹೊರತುಪಡಿಸಿ ದೇಶಾದ್ಯಂತ ಸೋಮವಾರದಿಂದ ವಿಮಾನ ಸೇವೆ ಪುನರ್ ಆರಂಭ
ಆಂಧ್ರ ಪ್ರದೇಶ, ಪಶ್ಚಿಮ ಬಂಗಾಳ ಹೊರತುಪಡಿಸಿದಂತೆ ಸೋಮವಾರದಿಂದ ದೇಶಾದ್ಯಂತ ವಿಮಾನ ಸೇವೆ ಪುನರ್ ಆರಂಭಗೊಳ್ಳಲಿದೆ. ಆಂಧ್ರಪ್ರದೇಶ ಮತ್ತು ಪಶ್ಚಿಮ ಬಂಗಾಳ ಕ್ರಮವಾಗಿ ಮೇ 26, ಮತ್ತು ಮೇ 28ರವರೆಗೂ ವಿಮಾನ ಸೇವೆ ಪುನರ್ ಆರಂಭವನ್ನು ಮುಂದೂಡಲು ನಿರ್ಧರಿಸಿವೆ.
ನವದೆಹಲಿ: ಆಂಧ್ರ ಪ್ರದೇಶ, ಪಶ್ಚಿಮ ಬಂಗಾಳ ಹೊರತುಪಡಿಸಿದಂತೆ ಸೋಮವಾರದಿಂದ ದೇಶಾದ್ಯಂತ ವಿಮಾನ ಸೇವೆ ಪುನರ್ ಆರಂಭಗೊಳ್ಳಲಿದೆ. ಆಂಧ್ರಪ್ರದೇಶ ಮತ್ತು ಪಶ್ಚಿಮ ಬಂಗಾಳ ಕ್ರಮವಾಗಿ ಮೇ 26, ಮತ್ತು ಮೇ 28ರವರೆಗೂ ವಿಮಾನ ಸೇವೆ ಪುನರ್ ಆರಂಭವನ್ನು ಮುಂದೂಡಲು ನಿರ್ಧರಿಸಿವೆ.
ದೇಶೀಯ ವಿಮಾನಗಳ ಕಾರ್ಯಾಚರಣೆಯನ್ನು ಪುನರಾರಂಭಿಸುವ ನಿರ್ಧಾರವನ್ನು ಘೋಷಿಸಿದ ಬೆನ್ನಲ್ಲೇ, ಆಗಸ್ಟ್ ಗೂ ಮುಂಚಿತವಾಗಿ ಕೆಲ ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಗಳ ಹಾರಾಟವನ್ನು ಆರಂಭಿಸಲು ಪ್ರಯತ್ನಿಸಲಾಗುವುದು ಎಂದು ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಶನಿವಾರ ಹೇಳಿಕೆ ನೀಡಿದ್ದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ನೀಡಿರುವ ಮಾಹಿತಿಯಂತೆ ದೇಶಾದ್ಯಂತ 3867 ಜನರು ಕೋವಿಡ್-19 ಸೋಂಕಿನಿಂದ ಮೃತಪಟ್ಟಿದ್ದು, ಸೋಂಕಿತರ ಸಂಖ್ಯೆ 1.31 ಲಕ್ಷಕ್ಕೆ ಏರಿಕೆ ಆಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.