ದೇಶ

ದೇಶದಲ್ಲಿ ಒಂದೇ ದಿನ ದಾಖಲೆಯ 6977 ಮಂದಿಯಲ್ಲಿ ಕೊರೋನಾ ಪತ್ತೆ, ಸೋಂಕಿತರ ಸಂಖ್ಯೆ 1,38,845ಕ್ಕೆ ಏರಿಕೆ

Manjula VN

ನವದೆಹಲಿ: ಸತತ 3ನೇ ದಿನ ಕೂಡ ಭಾರತದಲ್ಲಿ 6000ಕ್ಕೂ ಹೆಚ್ಚು ಮಂದಿಯಲ್ಲಿ ಕೊರೋನಾ ಕೇಸು ಪತ್ತೆಯಾಗಿದ್ದು, ಸೋಮವಾರ ದಾಖಲೆಯ 6,977 ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,38,845ಕ್ಕೆ ತಲುಪಿದೆ. 

ಇದರ ಜೊತೆಗೆ 24 ಗಂಟೆಗಳಲ್ಲಿ ಮಹಾಮಾರಿ ವೈರಸ್ 154 ಮಂದಿಯನ್ನು ಬಲಿಪಡೆದುಕೊಂಡಿದ್ದು, ಸಾವಿನ ಸಂಖ್ಯೆ 4021ಕ್ಕೆ ಏರಿಕೆಯಾಗಿದೆ. 

ಇನ್ನು ದೇಶದಲ್ಲಿ 1,38,845 ಮಂದಿ ಸೋಂಕಿತರ ಪೈಕಿ 57720 ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಒಂದೇ ದಿನ 6,977 ಮಂದಿಯಲ್ಲಿ ವೈರಸ್ ಪತ್ತೆಯಾಗಿರುವುದು ಈ ವರೆಗಿನ ಗರಿಷ್ಠ ಪ್ರಮಾಣವಾಗಿದೆ. 

ಮಹಾರಾಷ್ಟ್ರದಲ್ಲಿ ನಿನ್ನೆ ಒಂದೇ ದಿನ ಅತೀ ಹೆಚ್ಚು 3041 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಉಳಿದಂತೆ ತಮಿಳುನಾಡಿನಲ್ಲಿ 765, ದೆಹಲಿಯಲ್ಲಿ 508, ಗುಜರಾತ್ 394, ಪಶ್ಚಿಮ ಬಂಗಾಳದಲ್ಲಿ 208 ಮತ್ತು ರಾಜಸ್ಥಾನದಲ್ಲಿ 152 ಹೊಸ ಕೊರೋನಾ ಪ್ರಕರಣಗಳು ದಾಖಲಾಗಿವೆ. 

SCROLL FOR NEXT