ದೇಶ

ಮಧ್ಯಪ್ರದೇಶ: ಮದುವೆಯಲ್ಲಿ ಸಾವಿರಾರೂ ಮಂದಿ ಭಾಗಿ, ವರನ ವಿರುದ್ಧ ಪ್ರಕರಣ!

Vishwanath S

ಅಲಿರಾಜ್‌ಪುರ: ಮಧ್ಯಪ್ರದೇಶದ ಅಲಿರಾಜ್‌ಪುರ ಜಿಲ್ಲೆಯ ಹಳ್ಳಿಯೊಂದರಲ್ಲಿ ಕಂದಾಯ ಅಧಿಕಾರಿಯ ವಿವಾಹ ಸಮಾರಂಭದಲ್ಲಿ 1,000ಕ್ಕೂ ಹೆಚ್ಚು ಜನರು ಸೇರಿದ್ದು ಸಾಮಾಜಿಕ ಅಂತರ ಮಾನದಂಡಗಳನ್ನು ಧಿಕ್ಕರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಸ್ತುತ ರಾಜ್ಯದ ಬೆತುಲ್ ಜಿಲ್ಲೆಯಲ್ಲಿ 'ಪಟ್ವಾರಿ'(ಗ್ರಾಮ ಮಟ್ಟದ ಕಂದಾಯ ಅಧಿಕಾರಿ) 24 ವರ್ಷದ ವರ ಕಾನು ಚೌಹಾನ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಲಿರಾಜ್‌ಪುರದ ಬಿಲಾಸಾ ಗ್ರಾಮದಲ್ಲಿ ಸೋಮವಾರ ವಿವಾಹ ಸಮಾರಂಭ ನಡೆದಿದೆ. ಸಮಾರಂಭದಲ್ಲಿ ಭಾಗವಹಿಸಿದವರು ಯಾರೂ ಮಾಸ್ಕ್ ಧರಿಸಿರಲಿಲ್ಲ. ಜೊತೆಗೆ ಕೋವಿಡ್ 19 ಹರಡುವುದನ್ನು ನಿಯಂತ್ರಿಸುವ ಸಾಮಾಜಿಕ ಅಂತರ ಮಾರ್ಗಸೂಚಿಗಳನ್ನು ಅನುಸರಿಸದೆ ನೃತ್ಯ ಮಾಡುತ್ತಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಮಾರಂಭದಲ್ಲಿ ಭಾಗಿಯಾಗಿದ್ದ ವ್ಯಕ್ತಿಯೊಬ್ಬರು ಇದನ್ನು ತಮ್ಮ ಮೊಬೈಲ್ ನಲ್ಲಿ ಚಿತ್ರೀಕರಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಅಲ್ಲಿಗೆ ಬಂದ ಪೊಲೀಸರು ಸಹ ವಿಡಿಯೋ ಮಾಡಿದ್ದಾರೆ. 

ವರನ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಲಿರಾಜ್‌ಪುರದ ಪೊಲೀಸ್ ವರಿಷ್ಠಾಧಿಕಾರಿ ವಿಪುಲ್ ಶ್ರೀವಾಸ್ತವ ತಿಳಿಸಿದ್ದಾರೆ.

SCROLL FOR NEXT