ದೇಶ

ದೆಹಲಿ: 1988ರ ಬ್ಯಾಚ್ ನ ಐಆರ್ ಎಸ್ ಅಧಿಕಾರಿ ಕೇಶವ್ ಸಕ್ಸೆನಾ ಆತ್ಮಹತ್ಯೆಗೆ ಶರಣು

Lingaraj Badiger

ನವದೆಹಲಿ: 1988 ರ ಬ್ಯಾಚ್‌ನ ಭಾರತೀಯ ಕಂದಾಯ ಸೇವೆ(ಐಆರ್‌ಎಸ್)ಗಳ ಅಧಿಕಾರಿಯೊಬ್ಬರು ದೆಹಲಿಯ ಚಾಣಕ್ಯಪುರಿಯಲ್ಲಿರುವ ತಮ್ಮ ನಿವಾಸದಲ್ಲಿ ಸೀಲಿಂಗ್ ಫ್ಯಾನ್‌ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ.

ಆತ್ಮಹತ್ಯೆಗೆ ಶರಣಾದ ಅಧಿಕಾರಿಯನ್ನು 57 ವರ್ಷದ ಕೇಶವ್ ಸಕ್ಸೆನಾ ಎಂದು ಗುರುತಿಸಲಾಗಿದೆ. ಅವರು ಆದಾಯ ತೆರಿಗೆ ಇಲಾಖೆಯಲ್ಲಿ ಪ್ರಧಾನ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಸಕ್ಸೆನಾ ಅವರು ನವದೆಹಲಿಯ ಐಷಾರಾಮಿ ಚಾಣಕ್ಯಪುರಿಯ ಬಾಪು ಧಾಮ್ ನಿವಾಸಿಯಾಗಿದ್ದು, ತಮ್ಮ ನಿವಾಸದಲ್ಲಿ  ಸೀಲಿಂಗ್ ಫ್ಯಾನ್‌ ಗೆ ಬೆಡ್‌ಶೀಟ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಮೃತ ವ್ಯಕ್ತಿಯ ದೇಹದ ಮೇಲೆ ಕಟ್ಟಿದ ಗುರುತು ಇದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಂದು ಬೆಳಗ್ಗೆ 7 ಗಂಟೆಯ ಸುಮಾರಿಗೆ ಸಕ್ಸೆನಾ ಅವರ ಪತ್ನಿ, ಪತಿ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿರುವುದನ್ನು ನೋಡಿದ್ದಾರೆ. ಕೂಡಲೇ ಅವರನ್ನು ಚಾಣಕ್ಯಪುರಿಯ ಪ್ರಿಮಸ್ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಅವರು ಈಗಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಆಸ್ಪತ್ರೆಯ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡ ಕೊಠಡಿಯಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಅದನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ಪರಿಶೀಲಿಸುತ್ತಿದ್ದಾರೆ. 

ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

SCROLL FOR NEXT