ಸುಬ್ರಮಣಿಯನ್ ಸ್ವಾಮಿ 
ದೇಶ

ವಿಶ್ವಸಂಸ್ಥೆ ಅಧಿಕಾರಿಗೆ ಸುಬ್ರಮಣಿಯನ್ ಸ್ವಾಮಿ ಲೀಗಲ್ ನೋಟಿಸ್: ಪ್ರತಿಕ್ರಿಯೆ ನೀಡದಿದ್ದರೇ ಕೇಸ್ ದಾಖಲಿಸುವ ಎಚ್ಚರಿಕೆ

ವಿಶ್ವಸಂಸ್ಥೆಯ ವಿಶೇಷ ಸಲಹೆಗಾರ ಅದಮಾ ಡಿಯೆಂಗ್ ಅವರಿಗೆ ರಾಜ್ಯಸಭಾ ಸದಸ್ಯ ಮತ್ತು ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಕಾನೂನು ನೋಟಿಸ್  ಕಳುಹಿಸಿದ್ದಾರೆ. 

ನವದೆಹಲಿ: ವಿಶ್ವಸಂಸ್ಥೆಯ ವಿಶೇಷ ಸಲಹೆಗಾರ ಅದಮಾ ಡಿಯೆಂಗ್ ಅವರಿಗೆ ರಾಜ್ಯಸಭಾ ಸದಸ್ಯ ಮತ್ತು ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಕಾನೂನು ನೋಟಿಸ್  ಕಳುಹಿಸಿದ್ದಾರೆ. 

ವಿಶ್ವಸಂಸ್ಥೆಯ ಅಂಡರ್-ಸೆಕ್ರೆಟರಿ ಜನರಲ್ ಡಿಯೆಂಗ್‌ಗೆ ಲೀಗಲ್ ನೋಟಿಸ್ ಕಳುಹಿಸಲಾಗಿದೆ ಎಂದು ಸ್ವಾಮಿ ಟ್ವೀಟ್  ಮಾಡಿದ್ದಾರೆ. ರಮ್ನಿ ತನೇಜಾ, ರೋಕ್ಸಾನ ಸ್ವಾಮಿ ಮತ್ತು ತಮ್ಮ ಇಬ್ಬರು ಹೆಣ್ಣುಮಕ್ಕಳ ಸಹಾಯದೊಂದಿಗೆ ಇಷ್ಕಾರನ್ ಭಂಡಾರಿ ಅವರು ಈ ನೋಟಿಸ್‌ ಅನ್ನು ಸಿದ್ಧಪಡಿಸಿದ್ದಾರೆ' ಎಂದು ಹೇಳಿದ್ದಾರೆ. 'ತಾವು ಕಳುಹಿಸಿರುವ ನೋಟಿಸ್‌ಗೆ ಎರಡು ವಾರಗಳಲ್ಲಿ ಡಿಯೆಂಗ್‌ರಿಂದ ಪ್ರತಿಕ್ರಿಯೆ ಬರದಿದ್ದರೆ ಕ್ರಿಮಿನಲ್‌ ಮೊಕದ್ದಮೆ ಹೂಡಲಾಗುವುದು' ಎಂದು ತಿಳಿಸಿದ್ದಾರೆ.

ಡಿಸೆಂಬರ್ 2019 ರಲ್ಲಿ ಸುಬ್ರಮಣಿಯನ್‌ ಸ್ವಾಮಿ ಅವರು ಪಾಕಿಸ್ತಾನದ ಟಿವಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ, ಭಾರತೀಯ ಸಂವಿಧಾನದಲ್ಲಿ ಮುಸ್ಲಿಮರು ಹಿಂದೂಗಳಿಗೆ ಸಮಾನರಲ್ಲ ಎಂದು ಹೇಳಿಕೆ ನೀಡಿದ್ದಾರೆಂದು ಡಿಯೆಂಗ್‌ ಉಲ್ಲೇಖಿಸಿದ್ದರು.  ಇದಕ್ಕೆ ಪ್ರತಿಕ್ರಿಯಿಸಿದ್ದ ಸುಬ್ರಮಣಿಯನ್‌ ಸ್ವಾಮಿ,' ಇದೊಂದು ಸುಳ್ಳು ಹೇಳಿಕೆಯಾಗಿದೆ. ಆದ್ದರಿಂದ,
ನಾನು ಡಿಯೆಂಗ್‌ ವಿರುದ್ಧ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲು ಕ್ರಮಗಳನ್ನು ತೆಗೆದುಕೊಳ್ಳುತ್ತೇನೆ' ಎಂದು ಮೇ 19ರಂದು ಟ್ವೀಟ್‌ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್