ಐಇಡಿಯನ್ನು ಸ್ಫೋಟಗೊಳಿಸಿದ ಸೇನಾಪಡೆ 
ದೇಶ

ಪುಲ್ವಾಮದಲ್ಲಿ ಮತ್ತೊಮ್ಮೆ ದೊಡ್ಡಮಟ್ಟದ ದಾಳಿಗೆ ಉಗ್ರರ ಸಂಚು: ಯೋಧರ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಮತ್ತೊಮ್ಮೆ ಭಾರೀ ದಾಳಿ ನಡೆಸಲು ಉಗ್ರರು ನಡೆಸಿದ್ದ ಸಂಚನ್ನು ಭಾರತೀಯ ಯೋಧರು ವಿಫಲಗೊಳ್ಳುವಂತೆ ಮಾಡಿದ್ದಾರೆ. ಬರೋಬ್ಬರಿ 20 ಕೆಜಿಗೂ ಹೆಚ್ಚು ತೂಕದ ಸುಧಾರಿತ ಸ್ಫೋಟಕ ಸಾಧನ (ಐಟಿಡಿ) ಹೊತ್ತು ಸಾಗುತ್ತಿದ್ದ ವಾಹನವನ್ನು ಭದ್ರತಾ ಪಡೆಗಳು ತಡೆದಿದ್ದು, ಈ ಮೂಲಕ ಭಾರೀ ಅನಾಹುತವೊಂದು ತಪ್ಪುವಂತೆ ಮಾಡಿದ್ದಾರೆ. 

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಮತ್ತೊಮ್ಮೆ ಭಾರೀ ದಾಳಿ ನಡೆಸಲು ಉಗ್ರರು ನಡೆಸಿದ್ದ ಸಂಚನ್ನು ಭಾರತೀಯ ಯೋಧರು ವಿಫಲಗೊಳ್ಳುವಂತೆ ಮಾಡಿದ್ದಾರೆ. ಬರೋಬ್ಬರಿ 20 ಕೆಜಿಗೂ ಹೆಚ್ಚು ತೂಕದ ಸುಧಾರಿತ ಸ್ಫೋಟಕ ಸಾಧನ (ಐಟಿಡಿ) ಹೊತ್ತು ಸಾಗುತ್ತಿದ್ದ ವಾಹನವನ್ನು ಭದ್ರತಾ ಪಡೆಗಳು ತಡೆದಿದ್ದು, ಈ ಮೂಲಕ ಭಾರೀ ಅನಾಹುತವೊಂದು ತಪ್ಪುವಂತೆ ಮಾಡಿದ್ದಾರೆ. 

ನಕಲಿ ನೋಂದಣಿ ಸಂಖ್ಯೆ ಹೊಂದಿದ್ದ ಕಾರು ಇಂದು ಬೆಳಿಗ್ಗೆ ಚೆಕ್ ಪಾಯಿಂಟ್ ನಲ್ಲಿ ಚಲಿಸುತ್ತಿತ್ತು. ಈ ವೇಳೆ ಭದ್ರತಾ ಪಡೆಗಳು ನಿಲ್ಲಿಸುವಂತೆ ಸೂಚಿಸಿದರು, ಚಾಲಕ ಮತ್ತಷ್ಟು ವೇಗವಾಗಿ ಚಲಿಸಿಕೊಂಡು ಹೋಗಲು ಆರಂಭಿಸಿದ್ದ. 

ಈ ವೇಳೆ ಭದ್ರತಾ ಪಡೆಗಳು ಗುಂಡು ಹಾರಿಸಿದ್ದಾರೆ. ಆದರೂ ವಾಹನ ಚಲನೆ ಮುಂದುವರೆದಿದ್ದು, ಬಳಿಕ ಕಾರು ಚಾಲಕ ವಾಹನ ಬಿಟ್ಟು ಪರಾರಿಯಾಗುವಲ್ಲಿ ಸಫಲನಾಗಿದ್ದಾನೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಸಂಭಾವ್ಯ ದಾಳಿ ಕುರಿತಂತೆ ಗುಪ್ತಚರ ದಳ ಮಾಹಿತಿ ನೀಡಿದ್ದವು. ಐಇಡಿ ತುಂಬಿದ್ದ ವಾಹನ ಬರುವಿಕೆಗಾಗಿ ನಾವೂ ಕೂಡ ಕಾಯುತ್ತಿದ್ದೆವು. ಇದೀಗ ಐಇಡಿಯನ್ನು ಜೋಪಾನವಾಗಿ ಕಾರಿನಿಂದ ಹೊರಗೆ ತೆಗೆದಿದ್ದು, ಬಾಂಬ್ ನಿಷ್ಕ್ರಿಯ ದಳ ಅದನ್ನು ನಿಷ್ಕ್ರಿಯಗೊಳಿಸಿದೆ. 

ಬಾಂಬ್ ನಿಷ್ಕ್ರಿಯಗೊಳಿಸುವ ವೇಳೆ ಸ್ಥಳೀಯ ನಿವಾಸಿಗಳನ್ನು ಸ್ಥಳಾಂತರಗೊಳಿಸಲಾಗಿದ್ದು, ಈ ವೇಳೆ ಯಾವುದೇ ರೀತಿಯ ಸಾವು-ನೋವುಗಳು ಸಂಭವಿಸಿದಂತೆ ಹಾಗೂ ಯಾವುದೇ ಮನೆಗಳಿಗೂ ಹಾನಿಯಾಗದಂತೆ ನಿಯಂತ್ರಿತ ಸ್ಫೋಟಕದಿಂದ ಬಾಂಬ್ ನಿಷ್ಕ್ರಿಯಗೊಳಿಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. 

ಸೇನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಹಾಗೂ ಅರೆ ಸೇನಾಪಡೆಗಳು ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿದ್ದವು ಎಂದು ಪೊಲೀಸ್ ಅಧಿಕಾರಿ ವಿಜಯ್ ಕುಮಾರ್ ಅವರು ತಿಳಿಸಿದ್ದಾರೆ. 

2019ರ ಫೆಬ್ರವರಿ ತಿಂಗಳಿನಲ್ಲಿ ಪುಲ್ವಾಮ ಜಿಲ್ಲೆಯಲ್ಲಿ ಆತ್ಮಾಹುತಿ ಐಇಡಿ ದಾಳಿ ನಡೆಸಲಾಗಿತ್ತಿ. ಈ ವೇಳೆ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್'ಪಿಎಫ್)ಯ 41 ಯೋಧರು ಹುತಾತ್ಮರಾಗಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT