ದೇಶ

ಜೂನ್ 1ಕ್ಕೆ ನೈರುತ್ಯ ಮುಂಗಾರು ಕೇರಳ ಪ್ರವೇಶಿಸುವ ಸಾಧ್ಯತೆ- ಐಎಂಡಿ

Nagaraja AB

ನವದೆಹಲಿ: ಜೂನ್ 1ಕ್ಕೆ ನೈರುತ್ಯ ಮುಂಗಾರು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಗುರುವಾರ ಹೇಳಿದೆ.

ಜೂನ್ 5ರಂದು ಮುಂಗಾರು ಕೇರಳ ಪ್ರವೇಶಿಸಲಿದೆ ಎಂದು ಮೇ 15 ರಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಇದೀಗ ಜೂನ್ 1ರಂದೇ ಮುಂಗಾರು ಕೇರಳ ಪ್ರವೇಶಿಸುವ ಸಾಧ್ಯತೆ ಇರುವುದಾಗಿ ತಿಳಿಸಿದೆ.

ಆದಾಗ್ಯೂ, ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಅಬ್ಬರವು ಮಳೆಗಾಲದ ಪ್ರಗತಿಗೆ ಸಹಾಯ ಮಾಡುವ ಸಾಧ್ಯತೆಯಿದೆ.  ದೇಶದಲ್ಲಿ ಈ ವರ್ಷ ಮುಂಗಾರು ಸಾಮಾನ್ಯವಾಗಿರುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

SCROLL FOR NEXT