ದೇಶ

ಗರ್ಭಿಣಿಯರು, ಅನಾರೋಗ್ಯ ಪೀಡಿತರು 65 ವರ್ಷ ಮೇಲ್ಪಟ್ಟವರು ಅಗತ್ಯವಿದ್ದರೆ ಮಾತ್ರ ಶ್ರಮಿಕ್ ರೈಲಿನಲ್ಲಿ ಪ್ರಯಾಣಿಸಿ: ಕೇಂದ್ರ ಮನವಿ

Manjula VN

ನವದೆಹಲಿ: ಗರ್ಭಿಣಿಯರು, ಅನಾರೋಗ್ಯ ಪೀಡಿತರು ಹಾಗೂ 65 ವರ್ಷಕ್ಕಿಂತ ಮೇಲ್ಪಟ್ಟವರು ತೀರಾ ಅಗತ್ಯವಿದ್ದರೆ ಮಾತ್ರ ಶ್ರಮಿಕ್ ರೈಲಿನಲ್ಲಿ ಪ್ರಯಾಣಿಸಿ ಎಂದು ಕೇಂದ್ರ ಸರ್ಕಾರ ಮನವಿ ಮಾಡಿಕೊಂಡಿದೆ. 

ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್ ಅವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡುವ ಮೂಲಕ ಈ ಕುರಿತು ಜನತೆ ಬಳಿ ಮನವಿ ಮಾಡಿಕೊಂಡಿದ್ದಾರೆ.

ಗಂಭೀರ ಆರೋಗ್ಯ ಸಮಸ್ಯೆ ಎದುರಿಸುತ್ತಿರವವ್ರು, ಗರ್ಭಿಣಿ ಮಹಿಳೆಯರು, 65 ವರ್ಷಕ್ಕಿಂತ ಮೇಲ್ಪಟ್ಟವರು ಹಾಗೂ 10 ವರ್ಷಕ್ಕಿಂತ ಕೆಳಗಿನ ಮಕ್ಕಳು ತೀರಾ ಆಗತ್ಯವಿದ್ದರೆ ಮಾತ್ರ ಶ್ರಮಿಕ್ ರೈಲುಗಳಲ್ಲಿ ಪ್ರಯಾಣಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ. 

ಕೊರೋನಾ ಲಾಕ್'ಡೌನ್ ಪರಿಣಾಮ ವಲಸೆ ಕಾರ್ಮಿಕರು ತವರಿಗೆ ತೆರಳಲು ಸಂಕಷ್ಟ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಶ್ರಮಿಕ್ ರೈಲುಗಳನ್ನು ನಿಯೋಜಿಸಿದ್ದು, ಈ ರೈಲುಗಳ ಮೂಲಕ ಕಾರ್ಮಿಕರು ಪ್ರತೀನಿತ್ಯ ತಮ್ಮ ತಮ್ಮ ತವರಿಗೆ ಸೇರಿಕೊಳ್ಳುತ್ತಿದ್ದಾರೆ. 

ಈ ನಡುವಲ್ಲೇ ದೇಶದಲ್ಲಿ ಸೋಂಕಿತ ಪ್ರಕರಣ ಸಂಖ್ಯೆ ಪ್ರತೀನಿತ್ಯ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅಗತ್ಯವಿದ್ದರೆ ಮಾತ್ರ ಪ್ರಯಾಣಿಸುವಂತೆ ಜನತೆಗೆ ಮನವಿ ಮಾಡಿಕೊಂಡಿದೆ. 

SCROLL FOR NEXT