ಶ್ರಮಿಕ್ ವಿಶೇಷ ರೈಲು 
ದೇಶ

ಉತ್ತರ ಪ್ರದೇಶ: ಶ್ರಮಿಕ್ ರೈಲಿನ ಶೌಚಾಲಯದಲ್ಲಿ ವಲಸೆ ಕಾರ್ಮಿಕನ ಕೊಳೆತ ಶವ ಪತ್ತೆ

ಲಾಕ್ ಡೌನ್ ನಿಂದಾಗಿ ವಿವಿಧ ನಗರಗಳಲ್ಲಿ ಸಿಲುಕಿದ್ದ ವಲಸೆ ಕಾರ್ಮಿಕರ ಪ್ರಯಾಣಕ್ಕಾಗಿ ಕೇಂದ್ರ ಸರ್ಕಾರ ಆರಂಭಿಸಿದ್ದ ಶ್ರಮಿಕ್ ವಿಶೇಷ ರೈಲಿನ ಶೌಚಾಲಯದಲ್ಲಿ ವಲಸೆ ಕಾರ್ಮಿಕನ ಕೊಳೆತ ಶವ ಪತ್ತೆಯಾಗಿದ್ದು, ಹಲವು ದಿನಗಳ ಹಿಂದೆಯೇ ಕಾರ್ಮಿಕ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.

ಲಖನೌ: ಲಾಕ್ ಡೌನ್ ನಿಂದಾಗಿ ವಿವಿಧ ನಗರಗಳಲ್ಲಿ ಸಿಲುಕಿದ್ದ ವಲಸೆ ಕಾರ್ಮಿಕರ ಪ್ರಯಾಣಕ್ಕಾಗಿ ಕೇಂದ್ರ ಸರ್ಕಾರ ಆರಂಭಿಸಿದ್ದ ಶ್ರಮಿಕ್ ವಿಶೇಷ ರೈಲಿನ ಶೌಚಾಲಯದಲ್ಲಿ ವಲಸೆ ಕಾರ್ಮಿಕನ ಕೊಳೆತ ಶವ ಪತ್ತೆಯಾಗಿದ್ದು, ಹಲವು ದಿನಗಳ ಹಿಂದೆಯೇ ಕಾರ್ಮಿಕ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.

ಉತ್ತರ ಪ್ರದೇಶದ ಝಾನ್ಸಿ ರೈಲ್ವೆ ನಿಲ್ದಾಣದಲ್ಲಿ ನಿನ್ನೆ ಸಂಜೆ ರೈಲು ಬೋಗಿಯನ್ನು ಸ್ಯಾನಿಟೈಸ್ ಮಾಡಲು ಬಂದಿದ್ದ ಸ್ವಚ್ಛತಾ ಸಿಬ್ಬಂದಿ ಶವ ಕಂಡು ದಂಗಾಗಿದ್ದಾರೆ.

ಮೃತ ವ್ಯಕ್ತಿ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯ ಮೋಹನ್‌ಲಾಲ್ ಶರ್ಮಾ(38) ಎಂದು ಗುರುತಿಸಲಾಗಿದ್ದು,  ಮುಂಬೈನ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಲಾಕ್ ಡೌನ್ ನಂತರ ಮರಳಿ ತನ್ನ ತವರು ರಾಜ್ಯ ಉತ್ತರ ಪ್ರದೇಶಕ್ಕೆ ಆಗಮಿಸುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಶ್ರಮಿಕ್ ವಿಶೇಷ ರೈಲಿನ ಮೂಲಕ ಝಾನ್ಸಿ ತಲುಪಿದ್ದ ಮನೋಹರ್‌ಲಾಲ್ ಶರ್ಮಾ, ಅಲ್ಲಿಂದ ಬಸ್ತಿಗೆ ಮತ್ತೊಂದು ರೈಲಿನಲ್ಲಿ ಹೊರಡಬೇಕಿತ್ತು. ಆದರೆ ಝಾನ್ಸಿ ರೈಲು ನಿಲ್ದಾಣ ಬರುವುದಕ್ಕೂ ಮುಂಚೆ ಶೌಚಾಲಯಕ್ಕೆ ತೆರಳಿದ್ದಾಗ ಆತ ಮೃತಪಟ್ಟಿದ್ದಾನೆ.

ಶರ್ಮಾ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ನಂತರ ಸಾವಿಗೆ ಕಾರಣ ತಿಳಿಯಲಿದೆ ಎಂದು ಝಾನ್ಸಿ ಪೊಲೀಸರು ತಿಳಿಸಿದ್ದಾರೆ. 

ಮರಣೋತ್ತರ ಪರೀಕ್ಷೆಯ ನಂತರ ಶವವನ್ನು ಅವರ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು. ಆದರೆ ಶವ ಕೊಳೆತಿರುವುದರಿಂದ ಕೊವಿಡ್-19 ಪರೀಕ್ಷೆ ನಡೆಸಲು ಸಾಧ್ಯವಾಗುವುದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT