ದೇಶ

ಜಮ್ಮು-ಕಾಶ್ಮೀರ: ಕುಲ್ಗಾಂನಲ್ಲಿ ಎನ್'ಕೌಂಟ್, ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನಾಪಡೆ

Manjula VN

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆಗಳು ಎನ್'ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆಂದು ಶನಿವಾರ ತಿಳಿದಬಂದಿದೆ. 

ಕುಲ್ಗಾಂ ಜಿಲ್ಲೆಯ ವನ್ಪೋರಾ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿ ತಿಳಿಯುತ್ತಿದ್ದಂತೆಯೇ ಇಂದು ಬೆಳಿಗ್ಗೆ ಸೇನಾಪಡೆ ಕಾರ್ಯಾಚರಣೆ ಆರಂಭಿಸಿತ್ತು. 

ಈ ವೇಳೆ ಅಡಗಿ ಕುಳಿತಿದ್ದ ಉಗ್ರರು ಸೇನಾಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ ಭದ್ರತಾಪಡೆಗಳು ಇದೀಗ ಇಬ್ಬರು ಉಗ್ರರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. 

ಪ್ರಸ್ತುತ ಸ್ಥಳದಲ್ಲಿ ಇನ್ನೂ ಕಾರ್ಯಾಚರಣೆ ಮುಂದುವರೆದಿದ್ದು, ಹತ್ಯೆಯಾದ ಉಗ್ರರ ಬಳಿಯಿದ್ದ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ. 

SCROLL FOR NEXT