ದೇಶ

ಚೀನಾ ಗಡಿಯಲ್ಲಿ ಸೇನೆ ಮೇಲಿನ ಹಿಂಸಾಚಾರದ ವಿಡಿಯೋ ಸತ್ಯಕ್ಕೆ ದೂರವಾದುದ್ದು: ಭಾರತೀಯ ಸೇನೆ

Vishwanath S

ನವದೆಹಲಿ: ಭಾರತ-ಚೀನಾ ಗಡಿಯಲ್ಲಿ ಯಾವುದೇ ಹಿಂಸಾಚಾರದ ಘಟನೆಗಳು ನಡೆದಿಲ್ಲ. ಈ ಸಂಬಂಧ ಹೊರಬಿದ್ದಿರುವ ವಿಡಿಯೋಗಳು 'ದುರುದ್ದೇಶ'ದಿಂದ ಕೂಡಿವೆ ಎಂದು ಭಾರತೀಯ ಸೇನೆ ಸ್ಪಷ್ಟಪಡಿಸಿದೆ.

ಪೂರ್ವ ಲಡಾಕ್ ನ ಭಾರತ-ಚೀನಾ ಗಡಿಯಲ್ಲಿ ಭಾರತೀಯ ಸೇನೆಯ ಮೇಲೆ ಚೀನಾ ಸೈನಿಕರು ದಾಳಿ ನಡೆಸಿದ್ದಾರೆ ಎಂಬ ಮಾಹಿತಿಯ ವಿಡಿಯೋಗಳು  ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಗಮನಕ್ಕೆ ಬಂದಿದೆ. ಆದರೆ, ಅವುಗಳು ನಿಖರ ಮಾಹಿತಿಯಲ್ಲ. ಅದು ದುರುದ್ದೇಶದಿಂದ ಕೂಡಿದ ಮಾಹಿತಿಯಾಗಿದೆ. ಅಸಲಿಗೆ ಉತ್ತರದ ಗಡಿಯಲ್ಲಿ ಯಾವುದೇ ಹಿಂಸಾಚಾರ ನಡೆದಿಲ್ಲ ಎಂದು ಸೇನೆಯ ವಕ್ತಾರರು ತಿಳಿಸಿದ್ದಾರೆ. 

ಕೆಲ ದಿನಗಳ ಹಿಂದೆ ಗಡಿಯಲ್ಲಿ ಭಾರತೀಯ ಸೇನೆಯ ಮೇಲೆ ಚೀನಾ ಸೈನಿಕರು ದಾಳಿ ನಡೆಸಿ, ಕಲ್ಲು ಮತ್ತು ಕೋಲುಗಳಿಂದ ಹೊಡೆಯುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಜನರ ಆಕ್ರೋಶಕ್ಕೆ ಕಾರಣವಾಗಿದ್ದವು.

SCROLL FOR NEXT