ಸಂಗ್ರಹ ಚಿತ್ರ 
ದೇಶ

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಜಗಿದು ಉಗಿಯುವುದು ನಿಷೇಧ; ಆರೋಗ್ಯ ಇಲಾಖೆ ಆದೇಶ

ಕೊರೋನಾ ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ಸಾರ್ವಜನಿಕ ಸ್ಥಳಗಳಲ್ಲಿ ಜಗಿಯುವ ತಂಬಾಕು ಉತ್ಪನ್ನಗಳು ಹಾಗೂ ಪಾನ್‌ ಮಸಾಲ ಉತ್ಪನ್ನಗಳ ಸೇವನೆ ಮತ್ತು ಉಗುಳುವುದನ್ನು ನಿಷೇಧಿಸಿ ರಾಜ್ಯ ಆರೋಗ್ಯ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ.

ಬೆಂಗಳೂರು: ಕೊರೋನಾ ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ಸಾರ್ವಜನಿಕ ಸ್ಥಳಗಳಲ್ಲಿ ಜಗಿಯುವ ತಂಬಾಕು ಉತ್ಪನ್ನಗಳು ಹಾಗೂ ಪಾನ್‌ ಮಸಾಲ ಉತ್ಪನ್ನಗಳ ಸೇವನೆ ಮತ್ತು ಉಗುಳುವುದನ್ನು ನಿಷೇಧಿಸಿ ರಾಜ್ಯ ಆರೋಗ್ಯ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ.

ಈಗಾಗಲೇ ವಿಶ್ವ ಆರೋಗ್ಯ ಸಂಸ್ಥೆ ಮತ್ತು ಐಸಿಎಂಆರ್‌ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರಿಂದ ಕೋವಿಡ್ -19 ಹೆಚ್ಚುತ್ತಿದೆ ಎಂಬ ಕುರಿತು ಆತಂಕ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ತಂಬಾಕು ಜಗಿದು ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ನಿಷೇಧಿಸಲಾಗಿದೆ ಎಂದು ಇಲಾಖೆ  ಆದೇಶದಲ್ಲಿ ತಿಳಿಸಿದೆ.

ನಿಯಮ ಉಲ್ಲಂಘಿಸಿದಲ್ಲಿ, ಐಪಿಸಿ ಸೆಕ್ಷನ್‌ 188 (ಸಾರ್ವಜನಿಕ ಅಧಿಕಾರಿಯ ಆದೇಶ ಉಲ್ಲಂಘನೆ), 268, 269, 279 (ಜೀವಕ್ಕೆ ಅಪಾಯಕಾರಿಯಾದ ರೋಗವನ್ನು ನಿರ್ಲಕ್ಷ್ಯದಿಂದ ಹರಡುವುದು) ಅಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶ ಎಚ್ಚರಿಕೆ ನೀಡಿದೆ. ಈ ಹಿಂದೆ  ಎಲ್ಲ ರಾಜ್ಯಗಳಿಗೆ ಪತ್ರ ಬರೆದಿದ್ದ ಕೇಂದ್ರ ಸರ್ಕಾರ, ಸಾರ್ವಜನಿಕ ಸ್ಥಳಗಳಲ್ಲಿ ಜಗಿಯುವ ತಂಬಾಕು ಉತ್ಪನ್ನಗಳ ಸೇವನೆ ಮತ್ತು ಉಗಿಯುವುದನ್ನು ನಿಷೇಧಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿತ್ತು. ಈಗಾಗಲೇ ಬಿಹಾರ, ಜಾರ್ಖಂಡ್‌ ರಾಜ್ಯಗಳಲ್ಲಿ ಎಲ್ಲ ರೀತಿಯ  ಜಗಿಯುವ ತಂಬಾಕು, ಪಾನ್‌ ಮಸಾಲ ಉತ್ಪನ್ನಗಳನ್ನು ನಿಷೇಧಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

SCROLL FOR NEXT