ದೇಶ

ಸಾಲದ ಹೊರೆ ತಾಳದ ಒಂದೇ ಕುಟುಂಬದ ಐವರು ಆತ್ಮಹತ್ಯೆ!

ಆರ್ಥಿಕ ಹೊಡೆತ ತಾಳಲಾಗದೆ  ಮೂವರು ಪುತ್ರಿಯರು ಸೇರಿದಂತೆ ಕುಟುಂಬದ ಎಲ್ಲಾ ಐವರು ಸದಸ್ಯರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಅಸೋಂನ ಕೊಕ್ರಜಾರ್ ಜಿಲ್ಲೆಯ ಗೊಸ್ಸೈಗಾಂವ್ ನ ತುಳಸಿಬಿಲ್ ಪ್ರದೇಶದಲ್ಲಿ ವರದಿಯಾಗಿದೆ.

ಗುವಾಹತಿ: ಆರ್ಥಿಕ ಹೊಡೆತ ತಾಳಲಾಗದೆ  ಮೂವರು ಪುತ್ರಿಯರು ಸೇರಿದಂತೆ ಕುಟುಂಬದ ಎಲ್ಲಾ ಐವರು ಸದಸ್ಯರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಅಸೋಂನ ಕೊಕ್ರಜಾರ್ ಜಿಲ್ಲೆಯ ಗೊಸ್ಸೈಗಾಂವ್ ನ ತುಳಸಿಬಿಲ್ ಪ್ರದೇಶದಲ್ಲಿ ವರದಿಯಾಗಿದೆ.

ಇಂದು ಬೆಳಿಗ್ಗೆ ಗೊಸ್ಸೈಗಾಂವ್ ‌ನಲ್ಲಿರುವ ತಮ್ಮ ಬಾಡಿಗೆ ಮನೆಯೊಳಗೆ ನಿರ್ಮಲ್ ಪಾಲ್, ಅವರ ಪತ್ನಿ ಮತ್ತು ಮೂವರು ಪುತ್ರಿಯರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. 

ನಿರ್ಮಲ್ ಪಾಲ್ ಎಲ್ಪಿಜಿ ವಿತರಕ ಏಜೆನ್ಸಿಯನ್ನು ಹೊಂದಿದ್ದರು. ಅವರ ಕುಟುಂಬ ಇತ್ತೀಚೆಗೆ ಭಾರೀ ಹಣಕಾಸಿನ ಮುಗ್ಗಟ್ಟು ಎದುರಿಸಿತ್ತೆಂದು ಮೃತ ಕುಟುಂಬದ ನೆರೆ ಹೊರೆಯವರು ಹೇಳಿದ್ದಾರೆ.  16 ಮತ್ತು 17 ವರ್ಷ ವಯಸ್ಸಿನ ಹೆಣ್ಣು ಮಕ್ಕಳಿಬ್ಬರು ಇನ್ನೂ ಕಾಲೇಜು ವ್ಯಾಸಂಗ ಮಾಡುತ್ತಿದ್ದರೆ ಹಿರಿಯ ಪುತ್ರಿಗೆ  25 ವರ್ಷವಾಗಿತ್ತು.  ಆಕೆ ಪದವಿ ಮುಗಿಸಿ ಸ್ಥಳೀಯ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಳು. 

ಸಾಲವನ್ನು ಮರುಪಾವತಿಸಲು ಸಾಧ್ಯವಾಗದೆ, ಕುಟುಂಬವು ತಮ್ಮ ಪ್ರಾಣವನ್ನು ಕಳೆದುಕೊಂಡಿದೆ ಎಂದು ಶಂಕೆ ವ್ಯಕ್ತವಾಗಿದೆ. ಕೊಕ್ರಜಾರ್ ಪೊಲೀಸ್ ವರಿಷ್ಠಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ, ಪ್ರಾಥಮಿಕ ತನಿಖೆ ನಡೆಸಿದ್ದು ಆರ್ಥಿಕ ಹೊರೆ ಈ ದುರ್ಘಟನೆಗೆ ಕಾರಣವಾಗಿದೆ ಎಂದಿದ್ದಾರೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT