ದೇಶ

ಮಲ್ಯ ಗಡಿಪಾರು: 6 ವಾರಗಳಲ್ಲಿ ಸ್ಥಿತಿ ವರದಿ ಸಲ್ಲಿಸಲು ಸುಪ್ರೀಂ ಸೂಚನೆ

Srinivas Rao BV

ನವದೆಹಲಿ: ಮಲ್ಯ ಗಡಿಪಾರು ಪ್ರಕ್ರಿಯೆ ಯಾವ ಹಂತದಲ್ಲಿದೆ ಎಂಬ ಸಂಪೂರ್ಣ ಮಾಹಿತಿಯನ್ನು 6 ವಾರಗಳಲ್ಲಿ ಸಲ್ಲಿಸುವತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಈ ಪ್ರಕರಣದಲ್ಲಿ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುತ್ತಿದ್ದು, ವಿಚಾರಣೆ ನಡೆಸುತ್ತಿರುವ ನ್ಯಾ.ಯು.ಯು ಲಲಿತ್ ಅವರಿದ್ದ ಪೀಠದೆದುರು ವಾದ ಮಂಡಿಸಿದ್ದು, ಕೆಲವು ಕಾನೂನು ಪ್ರಕ್ರಿಯೆಗಳು ಇನ್ನೂ ಬಾಕಿ ಇದ್ದು, ಇದೇ ವಿಜಯ್ ಮಲ್ಯ ಹಸ್ತಾಂತರ ಪ್ರಕ್ರಿಯೆಯನ್ನು ವಿಳಂಬ ಮಾಡುತ್ತಿದೆ ಎಂದು ತಿಳಿಸಿದ್ದಾರೆ.

ತುಷಾರ್ ಮೆಹ್ತಾ ಅವರಿಂದ ಮಾಹಿತಿ ಪಡೆದ ನ್ಯಾಯಪೀಠ ಪ್ರಕರಣದ ವಿಚಾರಣೆಯನ್ನು ಜನವರಿ ಮೂರನೇ ವಾರಕ್ಕೆ ಮುಂದೂಡಿದೆ.

SCROLL FOR NEXT