ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕರ್ನಾಟಕ ಸೇರಿ 10 ರಾಜ್ಯಗಳ 54 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ: ಹೆಚ್ಚಿನ ಸಂಖ್ಯೆಯಲ್ಲಿ ಮತದಾನಕ್ಕೆ ಪ್ರಧಾನಿ ಮನವಿ

ಕರ್ನಾಟಕ ಸೇರಿ 10 ರಾಜ್ಯಗಳಲ್ಲಿ 54 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಯ ಮತದಾನ ಪ್ರಗತಿಯಲ್ಲಿದ್ದು, ಈ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಮನವಿ ಮಾಡಿಕೊಂಡಿದ್ದಾರೆ.

ಪ್ರಧಾನಿ ಮೋದಿ
Manjula VN
Updated On : 3 Nov 2020, 12:33 pm

ನವದೆಹಲಿ: ಕರ್ನಾಟಕ ಸೇರಿ 10 ರಾಜ್ಯಗಳಲ್ಲಿ 54 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಯ ಮತದಾನ ಪ್ರಗತಿಯಲ್ಲಿದ್ದು, ಈ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಮನವಿ ಮಾಡಿಕೊಂಡಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ದೇಶದ ವಿವಿಧ ಭಾಗಗಳಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಈ ಪ್ರದೇಶಗಳಲ್ಲಿನ ಜನರು ಹೆಚ್ಚೆಚ್ಚು ಸಂಖ್ಯೆಯಲ್ಲಿ ಮತ ಚಲಾಯಿಸಿ ಪ್ರಜಾಪ್ರಭುತ್ವದ ಈ ಉತ್ಸವವನ್ನು ಮತ್ತಷ್ಟು ಬಲಪಡಿಸುವಂತೆ ಮನವಿ ಮಾಡಿಕೊಳ್ಳುತ್ತೇನೆಂದು ಹೇಳಿದ್ದಾರೆ. 

ಮಧ್ಯಪ್ರದೇಶದಲ್ಲಿ 28, ಗುಜರಾತ್‌ನಲ್ಲಿ 8, ಉತ್ತರಪ್ರದೇಶದಲ್ಲಿ 7, ಒಡಿಶಾ, ನಾಗಾಲ್ಯಾಂಡ್, ಕರ್ನಾಟಕ ಮತ್ತು ಜಾರ್ಖಂಡ್‌ನಲ್ಲಿ ತಲಾ 2 ಮತ್ತು ಛತ್ತೀಸ್ಗಢ, ತೆಲಂಗಾಣ ಮತ್ತು ಹರಿಯಾಣದಲ್ಲಿ ತಲಾ ಒಂದು ಕ್ಷೇತ್ರಗಳಲ್ಲಿ ಇಂದು ಉಪಚುನಾವಣೆ ನಡೆಯುತ್ತಿದೆ. 

Advertisement

Advertisement

ಇಂದು ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಪ್ರಕ್ರಿಯೆ ಆರಂಭಗೊಂಡಿದ್ದು, ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ. ಛತ್ತೀಸ್ಗಢ, ಜಾರ್ಖಾಂಡ್ ಮತ್ತು ನಾಗಾಲ್ಯಾಂಡ್ ನಲ್ಲಿ ಕೊರೋನಾ ಸೋಂಕು ತಗುಲಿದ ವ್ಯಕ್ತಿಗಳಿಗೆ ಕೊನೆಯ ಒಂದು ಗಂಟೆಗಳಲ್ಲಿ ಮತ ಚಲಾಯಿಸಲು ಅವಕಾಶ ಮಾಡಿಕೊಡಲಾಗಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement