ದೇಶ

ಅಮೆರಿಕ ಚುನಾವಣೆ: ಕಮಲಾ ಹ್ಯಾರಿಸ್ ಗೆಲುವಿಗಾಗಿ ತಮಿಳುನಾಡಿನಲ್ಲಿ ವಿಶೇಷ ಪೂಜೆ

Lingaraj Badiger

ತಿರುವರೂರು: ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದಿಂದ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಭಾರತೀಯ ಮೂಲದ ಕಮಲಾ ಹ್ಯಾರಿಸ್ ಅವರ ಗೆಲುವಿಗಾಗಿ ಅವರ ತವರು ರಾಜ್ಯ ತಮಿಳುನಾಡಿನಲ್ಲಿ ಮಂಗಳವಾರ ವಿಶೇಷ ಪೂಜೆ ಮಾಡಲಾಯಿತು.

ತಮಿಳುನಾಡಿನ ತಿರುವರೂರು ಜಿಲ್ಲೆಯ ತುಲಸೇಂದ್ರಪುರಂನ ಗ್ರಾಮಸ್ಥರು ತಮ್ಮ ಊರಿನ ಕಮಲಾ ಹ್ಯಾರಿಸ್ ಅವರ ಗೆಲುವಿಗಾಗಿ ಸ್ಥಳೀಯ ದೇವತೆ ಅಯ್ಯನರ್ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಕಮಲಾ ಹ್ಯಾರಿಸ್ ಅವರ ತಾಯಿ ಶ್ಯಾಮಲಾ ಗೋಪಾಲನ್ ಮತ್ತು ಅವರ ಕುಟುಂಬ ದುಲಸೆಂದ್ರಾಪುರಂ ಗ್ರಾಮದವರಾಗಿದ್ದಾರೆ. ಕಮಲಾ ಅವರು ಡೆಮಾಕ್ರಟಿಕ್ ಪಕ್ಷದ ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿ ಎನ್ನುವುದು ತಿಳಿಯುತ್ತಿದ್ದಂತೆಯೇ ಗ್ರಾಮದ ಅನೇಕ ಕಡೆ ಅವರ ಚಿತ್ರವಿರುವ ಫ್ಲೆಕ್ಸ್‌ಗಳನ್ನು ಅಳವಡಿಸಲಾಗಿತ್ತು. ಇಂದು ದೇವಸ್ಥಾನದ ಹೊರಭಾಗದಲ್ಲಿ ಫ್ಲೆಕ್ಸ್ ಅಂಟಿಸಿದ ಗ್ರಾಮಸ್ಥರು, ಅಭಿಷೇಕ ಸೇರಿದಂತೆ ಅನೇಕ ಪೂಜಾ ವಿಧಿಗಳನ್ನು ನಡೆಸಿದರು. 

ಅಮೆರಿಕದಲ್ಲಿ ಇಂದಿನಿಂದ ಚುನಾವಣೆ ಆರಂಭಗೊಂಡಿದ್ದು, ಕಮಲಾ ಹ್ಯಾರಿಸ್ ಅವರು ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿದ್ದಾರೆ. ಒಂದು ವೇಳೆ ಅವರು ಈ ಚುನಾವಣೆಯಲ್ಲಿ ಗೆದ್ದರೆ ಅಮೆರಿಕದ ಮೊದಲ ಮಹಿಳಾ ಉಪಾಧ್ಯಕ್ಷೆ ಎಂಬ ಗೌರವಕ್ಕೆ ಪಾತ್ರರಾಗಲಿದ್ದಾರೆ.

SCROLL FOR NEXT