ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ರಿಪಬ್ಲಿಕ್ ಟಿವಿ ಮಾಲೀಕ, ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿಗೆ 14 ದಿನಗಳ ನ್ಯಾಯಾಂಗ ಬಂಧನ

ರಿಪಬ್ಲಿಕ್ ಟಿವಿ ಮಾಲೀಕ ಮತ್ತು ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಅಲಿಬಾಗ್ ಜ್ಯೂಡಿಷಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ್ ತೀರ್ಪು ಪ್ರಕಟಿಸಿದೆ.

ಅರ್ನಾಬ್ ಗೋಸ್ವಾಮಿ
Nagaraja AB
Updated On : 5 Nov 2020, 2:05 am

ಮುಂಬೈ: ರಿಪಬ್ಲಿಕ್ ಟಿವಿ ಮಾಲೀಕ ಮತ್ತು ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಅಲಿಬಾಗ್ ಜ್ಯೂಡಿಷಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ್ ತೀರ್ಪು ಪ್ರಕಟಿಸಿದೆ.

ಅನ್ವಯ್ ನಾಯಕ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿ ಸೇರಿದಂತೆ ಎಲ್ಲಾ ಮೂವರು ಆರೋಪಿಗಳನ್ನು ಮಹಾರಾಷ್ಟ್ರ ಪೊಲೀಸರು ಬುಧವಾರ ರಾತ್ರಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.

ಅರ್ಕಿಟೆಕ್ಟ್  ಅನ್ವಯ್ ನಾಯಕ್ 2018ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ತನ್ನ ಆತ್ಮಹತ್ಯೆಗೆ ಅರ್ನಾಬ್  ಗೋಸ್ವಾಮಿ, ಮತ್ತಿಬ್ಬರು  ಕಾರಣ ಎಂದು ಹೇಳಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದ. ವಾದ - ವಿವಾದ ಆಲಿಸಿದ
ನ್ಯಾಯಾಲಯ ಗೋಸ್ವಾಮಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ತೀರ್ಪು ನೀಡಿತು.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement