ದೇಶ

ಭಾರತ ತನ್ನ ಸಾರ್ವಭೌಮತ್ವ, ಪ್ರಾದೇಶಿಕ ಸಮಗ್ರತೆ ರಕ್ಷಿಸಲು ಬದ್ಧ: ರಾಜನಾಥ್ ಸಿಂಗ್

Lingaraj Badiger

ನವದೆಹಲಿ: "ಏಕಪಕ್ಷೀಯತೆ ಮತ್ತು ಆಕ್ರಮಣಶೀಲತೆ"ಯ ಹಿನ್ನೆಲೆಯಲ್ಲಿ ಭಾರತ ತನ್ನ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ರಕ್ಷಿಸಲು ಬದ್ಧವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ಹೇಳಿದ್ದಾರೆ.

ಮಾತುಕತೆ ಮೂಲಕ ಭಿನ್ನಾಭಿಪ್ರಾಯಗಳನ್ನು ಶಾಂತಿಯುತವಾಗಿ ಪರಿಹರಿಸಿಕೊಳ್ಳಲು ಭಾರತ ಬಯಸುತ್ತದೆ ಮತ್ತು ಗಡಿಯುದ್ದಕ್ಕೂ ಶಾಂತಿಯನ್ನು ಕಾಪಾಡಿಕೊಳ್ಳಲು ವಿವಿಧ ಒಪ್ಪಂದಗಳನ್ನು ಗೌರವಿಸಲು ಬದ್ಧವಾಗಿದೆ ಎಂದು ರಕ್ಷಣಾ ಸಚಿವರು ತಿಳಿಸಿದ್ದಾರೆ.

ರಾಷ್ಟ್ರೀಯ ರಕ್ಷಣಾ ಕಾಲೇಜು ಆಯೋಜಿಸಿದ್ದ ವರ್ಚುವಲ್ ವಿಚಾರ ಸಂಕಿರಣದಲ್ಲಿ ಮತನಾಡಿದ ರಾಜನಾಥ್ ಸಿಂಗ್ ಅವರು. ಏಕಪಕ್ಷೀಯತೆ ಮತ್ತು ಆಕ್ರಮಣಶೀಲತೆಯ ಹಿನ್ನೆಲೆಯಲ್ಲಿ ಭಾರತವು ತನ್ನ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ರಕ್ಷಿಸಲು ಸಿದ್ಧ" ಎಂದು ಹೇಳಿದರು.

ಭಾರತವು ಶಾಂತಿ ಪ್ರಿಯ ದೇಶವಾಗಿದ್ದು, ಭಿನ್ನಾಭಿಪ್ರಾಯಗಳು ವಿವಾದಗಳಾಗಬಾರದು ಎಂದು ರಕ್ಷಣಾ ಸಚಿವರು ಹೇಳಿದರು.

ಮೇ 6 ರಿಂದ ಭಾರತ ಮತ್ತು ಚೀನಾ ನಡುವೆ ಸಂಘರ್ಷ ಆರಂಭವಾಗಿದ್ದು, ಉಭಯ ದೇಶಗಳ ನಡುವಿನ ಸಂಬಂಧ ಗಮನಾರ್ಹವಾಗಿ ಬಿಗಡಾಯಿಸಿದೆ.

SCROLL FOR NEXT