ದೇಶ

ಮಹಾರಾಷ್ಟ್ರದ ರಾಯ್ ಗಾಡ್ ಜಿಲ್ಲೆಯ ರಾಸಾಯನಿಕ ಫ್ಯಾಕ್ಟರಿಯಲ್ಲಿ ಸ್ಫೋಟ: ಇಬ್ಬರು ಸಾವು, 6 ಮಂದಿಗೆ ಗಾಯ 

Sumana Upadhyaya

ಮುಂಬೈ: ಮಹಾರಾಷ್ಟ್ರದ ರಾಯ್ ಗಾಡ್ ಜಿಲ್ಲೆಯಲ್ಲಿ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಮೃತಪಟ್ಟು ಆರು ಮಂದಿ ಗಾಯಗೊಂಡಿರುವ ಘಟನೆ ಗುರುವಾರ ನಸುಕಿನ ಜಾವ ನಡೆದಿದೆ.

ಇಂದು ಮಧ್ಯರಾತ್ರಿ 2.30ರ ಸುಮಾರಿಗೆ ಈ ಸ್ಫೋಟ ಸಂಭವಿಸಿದ್ದು ರಾಯ್ ಗಾಡ್ ಜಿಲ್ಲೆಯ ಖೊಪೊಲಿ ಪಟ್ಟಣದ ಸಜ್ಗೌನ್ ಕೈಗಾರಿಕಾ ಪ್ರದೇಶದಲ್ಲಿರುವ ರಾಸಾಯನಿಕ ಫ್ಯಾಕ್ಟರಿಯಲ್ಲಿ ಈ ಸ್ಪೋಟ ಸಂಭವಿಸಿದ್ದು ನಂತರ ಫ್ಯಾಕ್ಟರಿಯ ಆವರಣದಲ್ಲಿ ಬೆಂಕಿ ಕಾಣಿಸಿಕೊಂಡಿತು.

ಮೃತಪಟ್ಟವರಲ್ಲಿ ಒಬ್ಬ ಮಹಿಳೆ ಕೂಡ ಸೇರಿದ್ದಾರೆ. ಇತರ ಆರು ಮಂದಿಗೆ ಗಾಯವಾಗಿದೆ. ಘಟನೆ ನಡೆದ ತಕ್ಷಣವೇ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ಮತ್ತು ಕಾರ್ಮಿಕರನ್ನು ರಕ್ಷಿಸುವ ಕಾರ್ಯದಲ್ಲಿ ನಿರತರಾದರು ಎಂದು ಖೊಪೊಲಿ ಪೊಲೀಸ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಗೊಂಡವರನ್ನು ಕೂಡಲೇ ಖೊಪೊಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. 

SCROLL FOR NEXT