ಸಂಗ್ರಹ ಚಿತ್ರ 
ದೇಶ

ಕೋವಿಡ್-19: ದೇಶಾದ್ಯಂತ ಒಂದೇ ದಿನ 50,209 ಮಂದಿಯಲ್ಲಿ ಕೊರೋನಾ ಪತ್ತೆ; ಒಟ್ಟು ಸೋಂಕಿತರ ಸಂಖ್ಯೆ 83.64 ಲಕ್ಷ

ಭಾರತದಲ್ಲಿ ಕೊರೋನಾ ಅಬ್ಬರ ಇನ್ನೇನು ಇಳಿಯಿತು ಎನ್ನುತ್ತಿರುವಾಗಲೇ ಸೋಂಕಿರನ ಪ್ರಮಾಣ ಮತ್ತೆ ಏರಿಕೆಯಾಗಿರುವುದು ಮತ್ತೆ ಜನರಲ್ಲಿ ಆತಂಕವನ್ನು ಸೃಷ್ಟಿಸಿದೆ. ಗುರುವಾರ ಮತ್ತೆ ಸೋಂಕಿನ ಪ್ರಮಾಣ ಹೆಚ್ಚಾಗಿದೆ. ಒಂದೇ ದಿನ ದೇಶದಲ್ಲಿ 50,209 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 83,64,086ಕ್ಕೆ ಏರಿಕೆಯಾಗಿದೆ. 

ನವದೆಹಲಿ: ಭಾರತದಲ್ಲಿ ಕೊರೋನಾ ಅಬ್ಬರ ಇನ್ನೇನು ಇಳಿಯಿತು ಎನ್ನುತ್ತಿರುವಾಗಲೇ ಸೋಂಕಿರನ ಪ್ರಮಾಣ ಮತ್ತೆ ಏರಿಕೆಯಾಗಿರುವುದು ಮತ್ತೆ ಜನರಲ್ಲಿ ಆತಂಕವನ್ನು ಸೃಷ್ಟಿಸಿದೆ. ಗುರುವಾರ ಮತ್ತೆ ಸೋಂಕಿನ ಪ್ರಮಾಣ ಹೆಚ್ಚಾಗಿದೆ. ಒಂದೇ ದಿನ ದೇಶದಲ್ಲಿ 50,209 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 83,64,086ಕ್ಕೆ ಏರಿಕೆಯಾಗಿದೆ. 

ದೇಶದಲ್ಲಿ ಕಳೆದೆರಡು ವಾರದಿಂದ ಹೊಸ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿತ್ತು. ಪ್ರತೀನಿತ್ಯ 90,000 ಸಾವಿರಕ್ಕೂ ಹೆಚ್ಚು ವರದಿಯಾಗುತ್ತಿದ್ದ ಪ್ರಕರಣಗಳ ಸಂಖ್ಯೆ 38,000 ಸಾವಿರಕ್ಕೆ ಬಂದು ನಿಂತಿತ್ತು. ಆದರೆ, ಗುರುವಾರ ಮತ್ತೆ ಸೋಂಕಿನ ಪ್ರಮಾಣ ಹೆಚ್ಚಾಗಿದೆ. ಒಂದೇ ದಿನ ಹೊಸ ಸೋಂಕಿನ ಸಂಖಅಯೆ 50 ಸಾವಿರ ದಾಟಿದೆ. ಸಾಲು ಸಾಲು ಹಬ್ಬಗಳಂದು ಮುನ್ನೆಚ್ಚರಿಕೆ ಕ್ರಮ ವಹಿಸದ ಜನರು ಮೈಮರೆತಿದ್ದೇ ಇದಕ್ಕೆ ಕಾರಣವೆಂದು ಹೇಳಲಾಗುತ್ತಿದೆ. 

ಇನ್ನು ಕಳೆದ 24 ಗಂಟೆಗಳಲ್ಲಿ 704 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 1,24,315ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಒಟ್ಟಾರೆ 83,64,086 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 55,331 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಈ ವರೆಗೂ ದೇಶದಲ್ಲಿ ಒಟ್ಟು 77,11,809 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆಂದು ತಿಳಿದುಬಂದಿದೆ. 77,11,809 ಮಂದಿ ಚೇತರಿಕೆಯೊಂದಿಗೆ ಪ್ರಸ್ತುತ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 5,27,962ಕ್ಕೆ ಇಳಿಕೆಯಾಗಿದೆ. 

ಈ ನಡುವೆ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12,09,425 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 11,42,08,384 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್

ಬಿಹಾರದ ವೈಶಾಲಿಯಲ್ಲಿ ದೋಣಿ ಮುಳುಗಿ ಕನಿಷ್ಠ 13 ಮಂದಿ ಸಾವು; ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ; Video

'ಅವನನ್ನು ಹಾಳು ಮಾಡಿದ್ದೇ ಟೀಂ ಇಂಡಿಯಾ ಮ್ಯಾನೇಜ್‌ಮೆಂಟ್'!: ವೈಭವ್ ಸೂರ್ಯವಂಶಿ ಕುರಿತು ಗಂಭೀರ್‌ ವಿರುದ್ಧ ವಿಶ್ವಕಪ್‌ ವಿಜೇತ ಆಟಗಾರ ಕಿಡಿ

ಬಿಹಾರದ ಯುವಕನ ಜೊತೆ ಪ್ರೀತಿ, ಮದುವೆಗೆ ಸಿದ್ಧತೆ; ತಾಯಿ ಸಲಹೆ ಬೆನ್ನಲ್ಲೇ ನಿರ್ಧಾರ ಬದಲಿಸಿದ ಬೆಂಗಳೂರು ಟೆಕ್ಕಿ.. ಆಗಿದ್ದೇನು?

'ಜಂತರ್ ಮಂತರ್‌'ಗೆ ಅಕ್ರಮ ಪ್ರವೇಶ ಆರೋಪ: ಮುನ್ನೆಚ್ಚರಿಕೆ ಕ್ರಮವಾಗಿ CJPಯ ರಂಕಾ, ದಾಸ್, ಶಿಂಧೆ ಬಂಧನ