ಕೇಂದ್ರ ಗೃಹ ಸಚಿವ ಅಮಿತ್ ಶಾ 
ದೇಶ

ಪಶ್ಚಿಮ ಬಂಗಾಳದಲ್ಲಿ ಮುಕ್ತ, ನ್ಯಾಯಸಮ್ಮತ ಚುನಾವಣೆ ನಡೆಯುವುದಾಗಿ ಅಮಿತ್ ಶಾ ಭರವಸೆ: ಬಿಜೆಪಿ

ಮುಂದಿನ ವರ್ಷ ಏಪ್ರಿಲ್ ತಿಂಗಳಲ್ಲಿ ಮುಕ್ತ ಹಾಗೂ ನ್ಯಾಯ ಸಮ್ಮತದಿಂದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ನಡೆಯುವುದಾಗಿ ಕೇಂದ್ರ ಸರ್ಕಾರ ಖಚಿತಪಡಿಸುವುದಾಗಿ ಪಶ್ಚಿಮ ಬಂಗಾಳದಲ್ಲಿನ ಪಕ್ಷದ ಮುಖಂಡರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.

ಕೊಲ್ಕತ್ತಾ: ಮುಂದಿನ ವರ್ಷ ಏಪ್ರಿಲ್ ತಿಂಗಳಲ್ಲಿ ಮುಕ್ತ ಹಾಗೂ ನ್ಯಾಯ ಸಮ್ಮತದಿಂದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ನಡೆಯುವುದಾಗಿ ಕೇಂದ್ರ ಸರ್ಕಾರ ಖಚಿತಪಡಿಸುವುದಾಗಿ ಪಶ್ಚಿಮ ಬಂಗಾಳದಲ್ಲಿನ ಪಕ್ಷದ ಮುಖಂಡರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.

ಬಿಜೆಪಿಯ ಆಂತರಿಕ ಸಭೆಯಲ್ಲಿ ಮಾತನಾಡಿರುವ ಅಮಿತ್ ಶಾ, ಪಕ್ಷವು ತೃಣಮೂಲ ಕಾಂಗ್ರೆಸ್ ನ್ನು ಪದಚ್ಯುತಿಗೊಳಿಸಲು ಹಾಗೂ ಮುಂದಿನ ಸರ್ಕಾರ ರಚಿಸುವ ನಿಟ್ಟಿನಲ್ಲಿ ಶ್ರಮ ವಹಿಸುವಂತೆ ರಾಜ್ಯ ಘಟಕದ ಮುಖಂಡರಿಗೆ ಸೂಚನೆ ನೀಡಿದ್ದಾರೆ.

ಸಂಘಟನೆಯನ್ನು ಬಲಪಡಿಸಲು ಮತ್ತು ಕೇಂದ್ರದ ಜನ ಪರವಾದ ನೀತಿಗಳನ್ನು ಸಾಮಾನ್ಯ ಜನರಿಗೆ ತಿಳಿಸುವಂತೆ ನೋಡಿಕೊಳ್ಳಬೇಕೆಂದು ಅವರು ಪಕ್ಷದ ಕಾರ್ಯಕರ್ತರಿಗೆ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳ ಚುನಾವಣೆ ಸಂದರ್ಭದಲ್ಲಿ ಹಿಂಸೆಯ ಬಗ್ಗೆ ಕೆಲ ಜನರು ಭಯಭೀತರಾಗಿದ್ದಾರೆ. ಮುಕ್ತ ಹಾಗೂ ನ್ಯಾಯ ಸಮ್ಮತದಿಂದ ಚುನಾವಣೆ ನಡೆಯುವುದಾಗಿ ಕೇಂದ್ರ ಸರ್ಕಾರ ಖಾತ್ರಿಪಡಿಸುತ್ತದೆ ಎಂದು ಅಮಿತ್ ಶಾ ಸಭೆಯಲ್ಲಿ ಹೇಳಿದ್ದು, ಮುಂದೆ ಬಿಜೆಪಿ ಸರ್ಕಾರ ರಚನೆಯಾಗಲು ಶ್ರಮ ವಹಿಸುವಂತೆ ತಿಳಿಸಿರುವುದಾಗಿ ರಾಜ್ಯ ಹಿರಿಯ ಮುಖಂಡರೊಬ್ಬರು ಸಭೆಯ ಬಳಿಕ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ