ಭಾರತೀಯ ಸೇನೆ 
ದೇಶ

ಪುಲ್ವಾಮಾ ಎನ್‍ ಕೌಂಟರ್‍: ಇಬ್ಬರು ಎಲ್ಇಟಿ ಉಗ್ರರು ಹತ, ಓರ್ವ ನಾಗರಿಕ ಸಾವು

ದಕ್ಷಿಣ ಕಾಶ್ಮೀರ ಜಿಲ್ಲೆಯಾದ ಪುಲ್ವಾಮದಲ್ಲಿ ಭದ್ರತಾ ಪಡೆಗಳು ನಡೆಸಿದ ತೀವ್ರ ಶೋಧ ಕಾರ್ಯಾಚರಣೆ ವೇಳೆ ಗುಂಡಿನ ಚಕಮಕಿ ನಡೆದು ಘಟನೆಯಲ್ಲಿ ಇಬ್ಬರು ಲಷ್ಕರ್ ಎ ತೊಯ್ಬಾ ಉಗ್ರರು ಹತರಾಗಿದ್ದು, ಓರ್ವ ನಾಗರಿಕ ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಶ್ರೀನಗರ: ದಕ್ಷಿಣ ಕಾಶ್ಮೀರ ಜಿಲ್ಲೆಯಾದ ಪುಲ್ವಾಮದಲ್ಲಿ ಭದ್ರತಾ ಪಡೆಗಳು ನಡೆಸಿದ ತೀವ್ರ ಶೋಧ ಕಾರ್ಯಾಚರಣೆ ವೇಳೆ ಗುಂಡಿನ ಚಕಮಕಿ ನಡೆದು ಘಟನೆಯಲ್ಲಿ ಇಬ್ಬರು ಲಷ್ಕರ್ ಎ ತೊಯ್ಬಾ ಉಗ್ರರು ಹತರಾಗಿದ್ದು, ಓರ್ವ ನಾಗರಿಕ ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಎನ್‍ಕೌಂಟರ್ ಬಗ್ಗೆ ವಿವರಗಳನ್ನು ನೀಡಿದ ಅವರು, ಉಗ್ರರು ಅಡಗಿರುವ ನಿರ್ದಿಷ್ಟ ಮಾಹಿತಿಯನ್ನಾಧರಿಸಿ ರಾಷ್ಟ್ರೀಯ ರೈಫಲ್ಸ್ , ಜಮ್ಮು ಮತ್ತು ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡ ಮತ್ತು ಸಿಆರ್‌ಪಿಎಫ್‌ ಜಂಟಿಯಾಗಿ ಪುಲ್ವಾಮ ಜಿಲ್ಲೆಯ ಪಾಂಪೋರ್‍ ನ ಮೀಗ್ ಲಾಲ್‍ಪೋರಾದಲ್ಲಿ ಗುರುವಾರ ಸಂಜೆ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದವು.

ಆದರೆ, ಭದ್ರತಾ ಪಡೆಗಳು ಹಳ್ಳಿಯ ಒಂದು ನಿರ್ದಿಷ್ಟ ಪ್ರದೇಶದತ್ತ ಸಾಗುತ್ತಿದ್ದಾಗ ಅಡಗಿದ್ದ ಉಗ್ರರು ಗ್ರೆನೇಡ್‌ಗಳನ್ನು ಎಸೆದು ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿಂದ ಮನಸೋಚ್ಛೆ ಗುಂಡು ಹಾರಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಗುಂಡು ಹಾರಿಸಿದಾಗ ಪರಸ್ಪರ ಗುಂಡಿನ ಚಕಮಕಿ ನಡೆದಿದೆ ಎಂದು ಅವರು ಹೇಳಿದ್ದಾರೆ.

ಉಗ್ರರಿಗೆ ಶರಣಾಗಲು ಅವಕಾಶ ನೀಡಲಾಯಿತು, ಆದರೆ ಮತ್ತೆ ಭದ್ರತಾ ಪಡೆಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಗುಂಡು ಹಾರಿಸಿದರು. ಇದಕ್ಕೆ ಪ್ರತೀಕಾರವಾಗಿ ಎನ್ಕೌಂಟರ್ ಮಾಡಲಾಯಿತು ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video

ಈ ಬಾರಿ ಮೈಸೂರು ದಸರಾ ಮತ್ತಷ್ಟು ಆಕರ್ಷಕ; 146 ಕಿ.ಮೀ. ದೀಪಾಲಂಕಾರ; 3,500 ಡ್ರೋನ್‌ಗಳ ಪ್ರದರ್ಶನ